WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, June 8, 2021

ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ: ಸರ್ಕಾರಿ ಜಮೀನು, ಕೆರೆಗಳ ರಕ್ಷಣೆ ನನ್ನ ಮುಖ್ಯ ಗುರಿ; ರೋಹಿಣಿ ಸಿಂಧೂರಿ

 


ಮೈಸೂರು: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಜೊತೆಗಿನ ಜಟಾಪಟಿ ನಂತರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದು, ಇದರ ಹಿಂದೆ ಕಣ್ಣಿಗೆ ಕಾಣುವುದಕ್ಕಿಂತ ಬಹುದೊಡ್ಡ ಪಿತೂರಿ ನಡೆದಿದೆ ಎಂಬ ಸುಳಿವು ನೀಡಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರೋಹಿಣಿ ಸಿಂಧೂರಿ, ನನ್ನ ವರ್ಗಾವಣೆ ಹಿಂದೆ ಭೂ ಮಾಫಿಯಾ ಪಿತೂರಿಯಿದೆ ಎಂದು ಹೇಳಿದ್ದಾರೆ. ಎಲ್ಲಾದಕ್ಕೂ ಜನರು ಸಾಕ್ಷಿಯಾಗಿದ್ದಾರೆ, ಎಲ್ಲಾ ಕಡೆ ಇದು ಸಾಮಾನ್ಯವಾಗಿದೆ. ಏನೇನು ನಡೆದಿದೆ ಎಂಬುದನ್ನು ಅಧಿಕಾರಿಗಳು ಎಲ್ಲವನ್ನು ಹೇಳಲು ಸಾಧ್ಯವಿಲ್ಲ, ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸುವುದಷ್ಟೇ ನನ್ನ ಗುರಿ ಎಂದು ಹೇಳಿದ್ದಾರೆ.
ಅಯ್ಯಜನಹುಂಡಿ ಮತ್ತು ಕೀರ್ಗಳ್ಳಿ ಕೆರೆಗಳ ಸುತ್ತಲಿನ ಒತ್ತುವರಿಯನ್ನು ತೆರವುಗೊಳಿಸಲು ನಾವು ಕ್ರಮ ಕೈಗೊಂಡಿದ್ದೇವೆ. ಕುರುಬರಹಳ್ಳಿಯಲ್ಲಿ ಸರ್ವೆ ಸಂಖ್ಯೆಯಲ್ಲಿ ಕೆಲವು ಸಮಸ್ಯೆಗಳಿದ್ದು ಅದು ಸುಪ್ರೀಂ ಕೋರ್ಟ್‌ಗೆ ಹೋಯಿತು. ಕೋರ್ಟ್ ನಲ್ಲಿ ಪ್ರಕರಣವನ್ನು ಚೆನ್ನಾಗಿ ಸಮರ್ಥಿಸಿಕೊಂಡಿದ್ದೇವೆ ಎಂದು ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಯಾಗಿರುವ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ರೋಹಿಣಿ ಸಿಂಧೂರಿ ಭೂ ಮಾಫಿಯಾವನ್ನು ವಿರುದ್ಧ ಕ್ರಮ ಕೈಗೊಳ್ಳಲು ಎಂಟು ತಿಂಗಳು ಸಮಯ ತೆಗೆದುಕೊಂಡಿದ್ದಾರೆ, ಈ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಹೀಗೆ ಯಾವ ಜಿಲ್ಲೆಯಲ್ಲಿ, ಸಂಸ್ಥೆಯಲ್ಲಿ ನಡೆದರೂ ಸಂಸ್ಥೆ ನಡೆಸುವುದು ಕಷ್ಟವಾಗುತ್ತದೆ, ಆದರೆ ನನಗೆ ಶಿಲ್ಪಾ ನಾಗ್ ಅವರ ಹತಾಶೆ, ಅಭದ್ರತೆ ಬಗ್ಗೆ ಅನುಕಂಪವಿದೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ. ಈಗ ಜನರಿಗೆ ಬೇಕಿರುವುದು ಕೋವಿಡ್ ನಿರ್ವಹಣೆ, ಅದು ಆಗಲಿ ಎಂದು ಆಶಿಸುತ್ತೇನೆ ಎಂದರು.
ಮೈಸೂರಿನಲ್ಲಿ ರಾಜಕಾರಣಿಗಳನ್ನು ಒಳಗೊಂಡ ಭೂ ಅಕ್ರಮಗಳ ಬಗ್ಗೆ ನೀಡಿದ ದೂರುಗಳ ಬಗ್ಗೆ ತನಿಖೆ ತ್ವರಿತಗೊಳಿಸಲು ಡಿಸಿಗೆ ಒತ್ತಾಯಿಸಿದ್ದೇನೆ ಎಂದು ಆರ್‌ಟಿಐ ಕಾರ್ಯಕರ್ತ ಎಂ.ಗಂಗರಾಜು ಹೇಳಿದ್ದಾರೆ.
(ಮಾಹಿತಿ ಕೃಪೆ ಕನ್ನಡ ಪ್ರಭ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ