WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, June 9, 2021

ಲಾಕ್‌ಡೌನ್; ವಶಕ್ಕೆ ಪಡೆದ ವಾಹನ ಬಿಡುಗಡೆಗೆ ಬಂತು ಹೊಸ ನಿಯಮ

 


ಬೆಂಗಳೂರು, ಜೂನ್ 09; ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ನಿಯಮಗಳನ್ನು ಉಲ್ಲಂಘನೆ ಮಾಡಿ ಅನಗತ್ಯವಾಗಿ ರಸ್ತೆಗೆ ಇಳಿದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ಅವುಗಳನ್ನು ಬಿಡುಗಡೆ ಮಾಡಲು ಹೊಸ ನಿಯಮ ಬಂದಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ವಶಕ್ಕೆ ಪಡೆದ ವಾಹನಗಳನ್ನು ಠಾಣೆ ಹಂತದಲ್ಲಿಯೇ ದಂಡವನ್ನು ಕಟ್ಟಿಸಿಕೊಂಡು ಬಿಡುಗಡೆ ಮಾಡಿ. ಅವುಗಳನ್ನು ನ್ಯಾಯಲಯದ ತನಕ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ.
ರಾಜ್ಯಾದ್ಯಂತ ಬೈಕ್, ಕಾರು, ಆಟೋ ಸೇರಿ ಸುಮಾರು 1.50 ಲಕ್ಷ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಜೂನ್ 14ರ ಮುಂಜಾನೆ 6 ಗಂಟೆಯ ತನಕ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.
ಎಲ್ಲಾ ವಾಹನಗಳ ಮಾಲೀಕರು ಅದನ್ನು ಬಿಡಿಸಿಕೊಳ್ಳಲು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಆಗಮಿಸಿದರೆ ಜನಜಂಗುಳಿ ಏರ್ಪಡಲಿದೆ. ವಾಹನಗಳನ್ನು ನಿಲ್ಲಿಸಲು ಸಹ ಸ್ಥಳಾವಕಾಶದ ಕೊರತೆ ಎದುರಾಗಲಿದೆ. ಠಾಣೆ ಹಂತದಲ್ಲೇ ಅವುಗಳನ್ನು ಬಿಡುಗಡೆಗೊಳಿಸಲು ಅವಕಾಶ ನೀಡಿ ಎಂದು ವಕೀಲರೊಬ್ಬರು ಅರ್ಜಿ ಹಾಕಿದ್ದರು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಎಲ್ಲಾ ವಾಹನಗಳಿಗೆ ನಿಗದಿತ ದಂಡ ಪಾವತಿಸಿಕೊಂಡು ಠಾಣೆ ಹಂತದಲ್ಲಿಯೇ ಬಿಡುಗಡೆ ಮಾಡಲು ಒಪ್ಪಿಗೆ ನೀಡಿತು.
ಕಳೆದ ವರ್ಷ ಲಾಕ್‌ಡೌನ್ ಘೋಷಣೆ ಮಾಡಿದ ಸಂದರ್ಭದಲ್ಲಿಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಠಾಣೆಯಲ್ಲೇ ವಾಹನ ವಿಲೇವಾರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಅದನ್ನು ರಾಜ್ಯಕ್ಕೆ ವಿಸ್ತರಣೆ ಮಾಡಲಾಗಿದೆ.
ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಲಾಕ್‌ಡೌನ್ ಮುಕ್ತಾಯವಾದ ಬಳಿಕ ಅವುಗಳನ್ನು ಮಾಲೀಕರಿಗೆ ವಾಪಸ್ ನೀಡಲಾಗುತ್ತದೆ.
(ಮಾಹಿತಿ ಕೃಪೆ Oneindia)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ