WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, June 12, 2021

ಬೆಲೆ ಏರಿಕೆ ಬಗ್ಗೆ ಮೋದಿ ಬಾಯಿ ಬಿಡುತ್ತಿಲ್ಲ: ಡಿ ಕೆ ಶಿವಕುಮಾರ್

 


ತುಮಕೂರು, ಜೂ.12- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಸಂಗ್ರಹವಾಗಿರುವ 20 ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ತೆರಿಗೆ ಹಣದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಒಂದಿಷ್ಟು ನೆರವಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಚಿತ್ರದುರ್ಗಕ್ಕೆ ತೆರಳುವ ಮಾರ್ಗ ಮಧ್ಯೆ ಶಿರಾದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಹಣ್ಣು, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್, ದಿನಸಿ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ.
ಮಧ್ಯಮ ವರ್ಗ, ಸಣ್ಣ ವ್ಯಾಪಾರಿಗಳು ನಷ್ಟು ಅನುಭವಿಸಿದ್ದಾರೆ. ಇಂಧನ ಬೆಲೆ ಹೆಚ್ಚಳದಿಂದ ಕೇಂದ್ರ ಸರ್ಕಾರ ಲಕ್ಷಾಂತರ ಲಾಭ ಮಾಡಿಕೊಂಡಿದೆ. ಅದರಲ್ಲಿ ನಷ್ಟ ಅನುಭವಿಸಿದ ಸಣ್ಯ ವ್ಯಾಪಾರೋದ್ಯಮಗಳಿಗೆ, ಜನರಿಗೆ ಲಾಭಾಂಶದಲ್ಲಿ ಸ್ವಲ್ಪ ಹಂಚಿ. ಬ್ಯಾಂಕ್ ಸಾಲಗಳ ಬಡ್ಡಿ ಮನ್ನಾ ಮಾಡಿ, ಸಾಲದ ಕಂತು ಮನ್ನಾ ಮಾಡಿ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಸಂಕಷ್ಟ ಕಾಲದಲ್ಲೂ 30 ಪೈಸೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ನಾನು ಇಂಧನ ಖಾತೆ ಸಚಿವನಾಗಿದ್ದೆ ಪಾವಗಡದಲ್ಲಿ ಸೋಲಾರ್ ಪವರ್ ಪಾರ್ಕ್ ಮಾಡಿ ಬಳಕೆಗಿಂತಲೂ ಹೆಚ್ಚು ವಿದ್ಯುತ್ ಉತ್ಪಾದಿಸಿದ್ದೇವೆ. ಈ ಸರ್ಕಾರ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಜನ ಸಾಮಾನ್ಯರ, ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿಲ್ಲ. ಗೊಬ್ಬರದ ಬೆಲೆ ಹೆಚ್ಚಳ ಮಾಡಿ ರೈತರಿಗೆ ಬರೆ ಹಾಕಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ ಜಮೀನಿನಲ್ಲೇ ನಾಶ ಮಾಡುತ್ತಿದ್ದಾರೆ. ಕಷ್ಟ ಪಟ್ಟು ಮಾರುಕಟ್ಟೆಗೆ ತಂದರೂ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ ಎಂದು ಅಸಮದಾನ ವ್ಯಕ್ತಪಡಿಸಿದರು.
ಕೊರೊನಾ ಸಂದರ್ಭದಲ್ಲಿ ಲಸಿಕೆಗೆ, ಬೆಡ್ ಗೆ, ಆಮ್ಲಜನಕಕ್ಕೆ, ಕೊನೆಗೆ ಸ್ಮಶಾನದಲ್ಲೂ ಜನ ಸರದಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದರು. ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಇಂದು ಜನ ಸಾಮಾನ್ಯರ ಬದುಕಿಗೆ ಕೂಳ್ಳಿ ಇಟ್ಟಿದ್ದಾರೆ. ದೇಶದಲ್ಲಿ ತೈಲ ದರ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ ಅದರೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಬಾಯಿ ಬಿಡುತ್ತಿಲ್ಲ. ಈ ದೇಶದಲ್ಲಿ ಜನ ಸಾಮಾನ್ಯರು ಬದಕ ಬೇಕು ಎಂದರೆ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಇಲ್ಲದೆ ಇದ್ದರೆ ಜನ ಸಾಮಾನ್ಯರ ಬದುಕಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದರು.
ಸಚಿವ ಟಿ ಬಿ ಜಯಚಂದ್ರ ಮಾತನಾಡಿ, ಕಳೆದ ಏಳು ವರ್ಷಗಳಿಂದ ಜನರಿಗೆ ಬರಿ ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ಟೋಪಿ ಹಾಕುತ್ತಿದ್ದಾರೆ. ಜನರಿಗೆ ಈಗ ಅರ್ಥವಾಗಿದೆ ಬಿಜೆಪಿ ಅಧಿಕಾರ ನೀಡಿ ತಪ್ಪು ಮಾಡಿದ್ದೇವೆ ಎಂದು ಪ್ರತಿ ನಿತ್ಯ ಪರಿತಪಿಸುತ್ತಿದ್ದಾರೆ. ದಿನಸಿ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಅದರೆ ಯಾರು ಬಾಯಿ ಬಿಡುತ್ತಿಲ್ಲ. ಡೀಸಲ್, ಪೆಟ್ರೋಲ್ ಬೆಲೆ 100 ಗಡಿ ದಾಟಿದೆ. ಇದರಿಂದ ಎಲ್ಲಾರ ಜೋಬಿಗೆ ಕತ್ತರಿ ಹಾಕಿದ್ದಾರೆ.
ಇನ್ನಾದರೂ ಜನರು ಬಿಜೆಪಿ ಭಟ್ಟಂಗಿತನ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಮಾಜಿ ಸಚಿವರಾದ ಸುಧಾಕರ್, ಆಂಜನೇಯ್ಯ, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಕಾಂಗ್ರೆಸ್ ನ ಮುಖಂಡರು ಉಪಸ್ಥಿತರಿದ್ದರು.
(ಮಾಹಿತಿ ಕೃಪೆ ಈ ಸಂಜೆ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ