6 ತಿಂಗಳ ಹಿಂದೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಮರುಜೀವ ನೀಡಲಾಗಿದ್ದು, ಲಾಕ್ ಡೌನ್ ತೆರವಾಗುತ್ತಿದ್ದಂತೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೊರೋನಾ ಸಂಕಷ್ಟ, ಲಾಕ್ಡೌನ್, ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ, ಮೊದಲಾದ ಅಗತ್ಯ ವಸ್ತುಗಳ ದರ ಏರಿಕೆಯಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಪ್ರಯಾಣದರ ಹೆಚ್ಚಳದ ಬಿಸಿ ತಟ್ಟಲಿದೆ. ಬಿಎಂಟಿಸಿ ರೀತಿಯಲ್ಲಿ ಬೇರೆ ಸಾರಿಗೆ ಸಂಸ್ಥೆಗಳು ಕೂಡ ಡೀಸೆಲ್ ಬೆಲೆ ಭಾರೀ ಏರಿಕೆ ಕಾರಣದಿಂದ ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಆದರೆ, ಪ್ರಯಾಣದರ ಏರಿಕೆ ಅನಿವಾರ್ಯವಾಗಿದ್ದರೂ, ಜನಸಾಮಾನ್ಯರಿಂದ ತೀವ್ರ ವಿರೋಧ ವ್ಯಕ್ತವಾಗುವ ಕಾರಣಕ್ಕೆ ತಕ್ಷಣವೇ ಟಿಕೆಟ್ ದರ ಹೆಚ್ಚಳ ಮಾಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.
(ಮಾಹಿತಿ ಕೃಪೆ ಕನ್ನಡದುನಿಯಾ )
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ