ಭಾನುವಾರ ಎಚ್. ಡಿ. ಕುಮಾರಸ್ವಾಮಿ ಪೆಟ್ರೋಲ್ ದರದ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲ್‌ಅನ್ನು ಜಿಎಸ್‌ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್ ಉದ್ದೇಶವಲ್ಲ, ಅದನ್ನು GSTಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.
"ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್-ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
(ಮಾಹಿತಿ ಕೃಪೆ Oneindia)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ