ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : 'DAP ರಸಗೊಬ್ಬರ' ಸಬ್ಸಿಡಿ 700ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ : 2021-22ನೇ ವರ್ಷದ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ 'ಪೋಷಕಾಂಶ ಆಧಾರಿತ ಸಬ್ಸಿಡಿ ದರ'ಗಳನ್ನು ನಿಗದಿಪಡಿಸುವ ರಸಗೊಬ್ಬರ ಇಲಾಖೆಯ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ದೇಶದ ರೈತರಿಗೆ ಕೆಲಸ ರಸಗೊಬ್ಬರಗಳ ಮೇಲೆ ಸಬ್ಸಿಡಿ ಮತ್ತಷ್ಟು ಹೆಚ್ಚಾಗಿ, ರಸಗೊಬ್ಬರ ಬೆಲೆ ಕಡಿತಗೊಂಡಂತೆ ಆಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, 2021-22ನೇ ವರ್ಷದ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ 'ಪೋಷಕಾಂಶ ಆಧಾರಿತ ಸಬ್ಸಿಡಿ ದರ'ಗಳನ್ನು ನಿಗದಿಪಡಿಸುವ ರಸಗೊಬ್ಬರ ಇಲಾಖೆಯ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
(ಮಾಹಿತಿ ಕೃಪೆ Kannada News Now)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ