WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, August 26, 2021

weather Update : ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ : 13 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

 

ಬೆಂಗಳೂರು : ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ 13 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 28ರಿಂದ 2 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ 13 ಜಿಲ್ಲೆಗಳಲ್ಲಿ ಆಗಸ್ಟ್ 28 ಮತ್ತು 29ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಮಾಹಿತಿ ಕೃಪೆ Kannada News Now )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ