ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆಯಲಿದೆ. ಇದೀಗ ಸೆಪ್ಟೆಂಬರ್ 15ರವರೆಗೂ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್ಗಢ್ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಜೊತೆಗೆ ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದಲ್ಲಿ ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.
(ಮಾಹಿತಿ ಕೃಪೆ Kannada News Now)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ