ಬೆಂಗಳೂರು, ಸೆಪ್ಟೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಪಂಜಾಬ್, ನವದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ, ಗುಜರಾತ್ ಪೂರ್ವ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ 10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆಕಂಡು ಬಂದಿದೆ. ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈನಲ್ಲಿ ಶೇ 7ರಷ್ಟು, ಆಗಸ್ಟ್‌ನಲ್ಲಿ ಶೇ 24 ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಆದರೆ ಈಗ ಮಳೆಯಾದರೆ ಭತ್ತ, ಹತ್ತಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
(ಮಾಹಿತಿ ಕೃಪೆ Oneindia)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ