ಐಐಎಸ್‌ಸಿಯಲ್ಲಿ ಹುದ್ದೆಗಳು
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಎಲೆಕ್ಟ್ರಾನಿಕ್ ಸಂಪನ್ಮೂಲ ನಿರ್ವಹಣೆ, ಪ್ರಾಜೆಕ್ಟ್ ಟ್ರೈನಿ, ಲೈಬ್ರರಿ ಇನ್ಫರ್ಮೇಷನ್ ಮ್ಯಾನೇಜ್‌ಮೆಂಟ್ ಟ್ರೈನಿ
ಹುದ್ದೆಗಳ ಸಂಖ್ಯೆ: 14
ಸ್ಥಳ: ಬೆಂಗಳೂರು
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ, ಬಿಟೆಕ್, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ: ಗರಿಷ್ಠ 30 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 14, 2021
ಹೆಚ್ಚಿನ ಮಾಹಿತಿಗೆ: https://iisc.ac.in/opportunities/
***
ಕರೂರ್ ವೈಶ್ಯ ಬ್ಯಾಂಕ್‌ನಲ್ಲಿ ಹುದ್ದೆಗಳು
ಕರೂರ್ ವೈಶ್ಯ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50 ಅಂಕಗಳೊಂದಿಗೆ ಪದವಿ ಮುಗಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳಿಗೆ ನವೆಂಬರ್ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ಆಗಿರಬೇಕು. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31, 2021
ಹೆಚ್ಚಿನ ಮಾಹಿತಿಗೆ: https://www.kvb.co.in/
***
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳು
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2021-22 ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: 115
ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಬಿಟೆಕ್, ಎಂಎಸ್‌ಸಿ, ಸಿಎ ಹಾಗೂ ಇತ್ಯಾದಿ.
ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷಗಳಾಗಿರಬೇಕು.
ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ₹ 850, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ₹ 175
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 17, 2021
ಹೆಚ್ಚಿನ ಮಾಹಿತಿಗೆ: https://www.centralbankofindia.co.in/en/recruitments
***
ಎಐಐಎಂಎಸ್‌ನಲ್ಲಿ ಹುದ್ದೆಗಳು
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್), ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು.
ಹುದ್ದೆ: ಜ್ಯೂನಿಯರ್ ರೆಸಿಡೆಂಟ್
ಹುದ್ದೆಗಳ ಸಂಖ್ಯೆ: 24
ಸ್ಥಳ: ಆಂಧ್ರಪ್ರದೇಶದ ಗುಂಟೂರು
ವಿದ್ಯಾರ್ಹತೆ: ಈ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಗರಿಷ್ಠ 33 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 1000, ಎಸ್‌ಸಿ, ಎಸ್‌ಸಿ ಅಭ್ಯರ್ಥಿಗಳಿಗೆ ₹ 500 ಹಾಗೂ ಅಂಗವಿಕಲರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ
ಸಂದರ್ಶನ ದಿನಾಂಕ: ಜನವರಿ 5, 2022
ಸಂದರ್ಶನ ನಡೆಯುವ ಸ್ಥಳ: ಧರ್ಮಶಾಲಾ ಕಟ್ಟಡ, ಏಮ್ಸ್ ಮಂಗಳಗಿರಿ ಮೇನ್ ಕ್ಯಾಂಪಸ್.
ಹೆಚ್ಚಿನ ಮಾಹಿತಿಗೆ: https://www.aiimsexams.ac.in/info/Recruitments_new.html
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ