ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್ಡೌನ್ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್ಡೌನ್ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ ಬಡತನ ರೇಖೆಯ ಕೆಳಗಿರುವ ಯಾರೂ ಸಹ ಉಪವಾಸದಿಂದ ಇರಬಾರದು. ಹೀಗಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನ ಉಚಿತವಾಗಿ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅನ್ವಯವಾಗುವಂತೆ ಸುತ್ತೋಲೆಯನ್ನ ಪ್ರಕಟಿಸಲಾಗಿದೆ.
(ಮಾಹಿತಿ ಕೃಪೆ ಕನ್ನಡದುನಿಯಾ
)