ಉಡುಪಿ, ಜೂ.12: ಕೋವಿಡ್ ಸಂದರ್ಭದಲ್ಲಿ ಸೋಂಕಿತರ ಬಳಕೆಗೆ ಉಪಯೋಗಿಸಲು ಸುಮಾರು 20 ಲಕ್ಷರೂ.ವೆಚ್ಚದ ಸುಸಜ್ಜಿತ ಆಯಂಬುಲೆನ್ಸ್ ಒಂದನ್ನು ಉಡುಪಿ ಶ್ರೀಕೃಷ್ಣ ಮಠದ ಪರವಾಗಿ ಅಷ್ಟ ಮಠಾಧೀಶರು ಶುಕ್ರವಾರ ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿದರು.
ಶ್ರೀಕೃಷ್ಣಮಠದ ರಾಜಾಂಗಣ ಬಳಿ ಅಷ್ಟ ಮಠಾಧೀಶರು ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ ವಾಹನವನ್ನು ಅಷ್ಟಮಠಾಧೀಶರು ಜಿಲ್ಲಾಧಿಕಾರಿ ಜಿ.ಜಗದೀಶ್‌ಗೆ ಚಾಲನಾ ಕೀ ನಿೀಡುವ ಮೂಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ, ಶಿರೂರು ಮಠದ ಶ್ರೀವೇದವರ್ಧನತೀರ್ಥ ಹಾಗೂ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ಮೊದಲಾದವರು ಉಪಸ್ಥಿತರಿದ್ದರು.
(ಮಾಹಿತಿ ಕೃಪೆ ವಾರ್ತಾಭಾರತಿ)