Thursday, August 26, 2021
weather Update : ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ : 13 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ
ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವನ್ನು ಕೊಂಡಾಡಿರುವ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಮೋದಿಯವರು ಪ್ರಧಾನಿಯಾಗಿರುವ ಕಾರಣಕ್ಕೆ ದೇಶ ಒಳ್ಳೆ ಮಟ್ಟದಲ್ಲಿ ಸುಧಾರಣೆ ಕಾಣುತ್ತಿದೆ. ಒಂದೊಮ್ಮೆ ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗದಿದ್ದರೆ ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಎಲ್ಲ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು ಎಂದು ಭಾವಿಸೋಣ. ಇನ್ನುಳಿದ ಪಕ್ಷಗಳವರು ಮಂತ್ರಿಗಳಾಗಲಿದ್ದು, ಇಂತಹ ಸಂದರ್ಭದಲ್ಲಿ ಪಾಕಿಸ್ತಾನದವರು ಗುಂಡು ಹೊಡೆದರೆ ನಮ್ಮ ಸೈನಿಕರು ಪ್ರತ್ಯುತ್ತರ ನೀಡಲು ಇವರುಗಳು ಬಿಡುತ್ತಾರೆಯೇ ಎಂದು ಪ್ರಶ್ನಿಸಿದರು. ಇನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನಿಗಳಿಗೆ ಕೆಲವರು ಹೋಲಿಸುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಎಸ್.ಎಲ್. ಭೈರಪ್ಪ, ಪ್ರಜಾಪ್ರಭುತ್ವ ಇರುವ ರಾಷ್ಟ್ರದಲ್ಲಿ ಎಂದಿಗೂ ತಾಲಿಬಾನಿಗಳಂತಿರುವವರು ಇರಲು ಸಾಧ್ಯವಿಲ್ಲ. ಕೆಲವರು ಅಧಿಕಾರಕ್ಕಾಗಿ ತಮಗೆ ಮನಬಂದಂತೆ ಮಾತನಾಡುತ್ತಾರೆ ಎಂದು ಹೇಳಿದರು.
(ಮಾಹಿತಿ ಕೃಪೆ ಕನ್ನಡದುನಿಯಾ)
Subscribe to:
Posts (Atom)