(ಮಾಹಿತಿ ಕೃಪೆ ವಿಜಯಕರ್ನಾಟಕ)
Saturday, September 4, 2021
Friday, September 3, 2021
ದೇವಾಲಯದಲ್ಲಿ ನಾವು ಮಾಡಬಾರದ ಅಪಚಾರಗಳು
" *ದೇವಾಲಯದಲ್ಲಿ ನಾವು ಮಾಡೋ ಅಪರಾಧಗಳು*..
೧. ದೇವರ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨. ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩. ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಭಗವಂತನ ಮಂದಿರಕ್ಕೆ ಸಿಗರೇಟು, ಬೀಡಾ, ಸಾರಾಯಿ, ಮಾಂಸ ಸೇವಿಸಿ ಪ್ರವೇಶಿಸುವುದು.
೫. ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್, ಚಪ್ಪಲಿ, ಕೈ ಚೀಲ ಧರಿಸಿ ಕೊಂಡು ಹೋಗುವುದು.
೬. ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭. ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮. ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯. ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦. ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.
೧೧. ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು. ದೇವರ ಹುಂಡಿ, ಕಾಣಿಕೆ ಹಣ ದುರುಪಯೋಗ ಮಾಡಿಕೊಳ್ಳುವುದು.
೧೨. ದೇವರಿಗೆ ಸಂಬಂಧಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩. ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.
೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..
೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨. ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..
೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನು ತೋರಿಸಿ ಕೂಡುವುದು..
೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩. ದೇವಾಲಯದಲ್ಲಿ ಕಣ್ಣು, ಕಿವಿ, ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪. ದೇವಾಲಯದಲ್ಲಿ ಉಗುರು ಕಡಿಯುವುದು, ಕತ್ತರಿಸುವುದು.
೩೫. ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು, ಕಾಯಿ, ಹೂವು, ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ, ಭಿಕ್ಷುಕರಿಗೆ ನೀಡುವುದು.
೩೬. ದೇವಾಲಯದ ಹೊರಗೆ ಕುಳಿತಿರುವ ಭಿಕ್ಷುಕರಿಗೆ ಭಿಕ್ಷೆ ನೀಡಿ ಭಿಕ್ಷಾ ವೃತ್ತಿಯನ್ನು ಉತ್ತೇಜಿಸುವುದು.
೩೭. ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮. ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯. ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦. ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.
೪೧. ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨. ದೇವರಿಗೆ ಅರ್ಪಿಸುವ ಮೊದಲು ಹೂವು, ಹಣ್ಣು, ಊದು ಬತ್ತಿಗಳನ್ನು ಆಘ್ರಾಣಿಸುವುದು (ಮೂಸಿ ನೋಡುವುದು).
೪೩. ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು. ಕಡಿಮೆ ಬಾಡಿಗೆಗೆ ಪಡೆದು ಹೆಚ್ಚಿನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪. ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫. ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.
Tuesday, August 31, 2021
ರಾಜ್ಯದ ಜನರಲ್ಲಿ ಕೊರೋನಾ ಜೊತೆ ಮತ್ತೊಂದು ಆತಂಕ ಶುರು..?
ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ನಡೆಸಲಾದ ಈ ಅಭಿಯಾನದಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ 5,37,333 ಜನರನ್ನು ಕ್ಷಯ ರೋಗ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 104 ಜನರಲ್ಲಿ ಕ್ಷಯರೋಗ ಪತ್ತೆಯಾಗಿದೆ.
ಇದೇ ವೇಳೆ ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಸಂಪರ್ಕ ಹೊಂದಿದ್ದ 51 ಜನರಲ್ಲಿ ಕ್ಷಯ ರೋಗ ಕಂಡು ಬಂದಿದೆ. ರೋಗ ತಪಾಸಣೆಗಾಗಿ 17,74,240 ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಮನೆಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಲಾಗಿತ್ತು ಎಂದು ಇಲಾಖೆ ತಿಳಿಸಿದೆ.
ಕ್ಷಯ ರೋಗ ಪತ್ತೆ ಅಭಿಯಾನದಲ್ಲಿ ಒಟ್ಟು 24,598 ಜನರಲ್ಲಿ ಕ್ಷಯ ರೋಗ ಇರುವ ಬಗ್ಗೆ ಆರೋಗ್ಯ ಇಲಾಖೆ ಶಂಕೆ ವ್ಯಕ್ತಪಡಿಸಿತ್ತು. ಆದರೆ ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ 104 ಮಂದಿಗೆ ಕ್ಷಯ ರೋಗ ಬಂದಿರುವುದು ಪತ್ತೆಯಾಗಿದೆ.
ಕ್ಷಯ ರೋಗವು ಕೋವಿಡ್ ಸೋಂಕಿತರಲ್ಲಿ ಹೆಚ್ಚಿನ ಅಪಾಯ ಉಂಟು ಮಾಡುವುದರಿಂದ, ಸರ್ಕಾರ ಕೋವಿಡ್‍ನಿಂದ ಚೇತರಿಸಿಕೊಂಡವರ ಕ್ಷಯ ರೋಗ ಪತ್ತೆ ಅಭಿಯಾನ ಹಮ್ಮಿಕೊಂಡಿದೆ