WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, September 11, 2021

ಇನ್ಮುಂದೆ ಈ ರಾಜ್ಯದ ಸರ್ಕಾರಿ ನೌಕರರು ಜೀನ್ಸ್-ಟೀ ಶರ್ಟ್ ಗಳನ್ನು ಧರಿಸುವಂತಿಲ್ಲ!

ನವದೆಹಲಿ : ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಉತ್ತರಾಖಂಡದ ಸರ್ಕಾರಿ ನೌಕರರು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಟಿ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ವರದಿಯ ಪ್ರಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ ಧರಿಸುವಂತಹ ಅನೌಪಚಾರಿಕ ಡ್ರೆಸ್ಸಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲಾ ಅಧಿಕಾರಿಗಳು, ಉದ್ಯೋಗಿಗಳು ಕಚೇರಿಯಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಮತ್ತು ಉನ್ನತ ಅಧಿಕಾರಿಗಳೊಂದಿಗಿನ ಸಭೆಗಳಲ್ಲಿ ಜೀನ್ಸ್, ಟೀ ಶರ್ಟ್ ಧರಿಸಬಾರದು ಎಂದು ಅವರು ಹೇಳಿದರು. ಇದಲ್ಲದೆ, 'ಅನುಸರಣೆ ಮಾಡದವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಅವರು ಎಚ್ಚರಿಸಿದ್ದಾರೆ.
ಕೆಲವು ಜಿಲ್ಲಾ ಮಟ್ಟದ ಉದ್ಯೋಗಿಗಳು ಮತ್ತು ಅಧಿಕಾರಿಗಳು ಡೆನಿಮ್ ಮತ್ತು ಟಿ-ಶರ್ಟ್ ಗಳನ್ನು ಹಾಕಿಕೊಂಡು ಸಭೆಗಳಿಗೆ ಹಾಜರಾಗುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಇದು ಸರ್ಕಾರಿ ನೌಕರನಿಗೆ ಯೋಗ್ಯವಾಗಿ ಕಾಣುವುದಿಲ್ಲ ಎಂದು ಕುಮಾರ್ ಹೇಳಿದ್ದಾರೆ.
(ಮಾಹಿತಿ ಕೃಪೆ Kannada News Now)

ಸೆ. 15ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆಯಲಿದೆ. ಇದೀಗ ಸೆಪ್ಟೆಂಬರ್ 15ರವರೆಗೂ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್​ಗಢ್ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಜೊತೆಗೆ ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳದಲ್ಲಿ ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.
(ಮಾಹಿತಿ ಕೃಪೆ Kannada News Now)

ಜಿಲ್ಲಾ ಖನಿಜ ಪ್ರತಿಷ್ಠಾನ ಪ್ರಗತಿ ಪರಿಶೀಲನಾ ಸಭೆ | ಸಚಿವ ಆನಂದಸಿಂಗ್ ಬಾಗಿ

 

(ಮಾಹಿತಿ ಕೃಪೆ ವಿಜಯ ಕರ್ನಾಟಕ)

ಬುದ್ದಿಪ್ರದಾಯಕ ಸಿದ್ದಿವಿನಾಯಕ

vijaykarnataka

ಹೊಸ ಚನ್ನಪಟ್ಟಣ ಸಿರುಗುಪ್ಪ (ತಾ). ಬಳ್ಳಾರಿ (ಜಿ) ಯಲ್ಲಿ ಯಾರು ಇಲ್ಲದವೇಳೆ ಗ್ಯಾಸ್ ಬ್ಲಾಸ್ಟ್ ದುರಂತವಗಿದೆ.

 ಕಳೆದ ಮಂಗಳವಾರ 07/09/2021 ರಂದು  ಮಾರೆಪ್ಪ  s/o ಪಕ್ಕೀರಪ್ಪ #21ಸ್ಟ್ ವಾರ್ಡ್ ಹರಿಜನ ಕಾಲೊನಿ.. ಹಾವಿನಹಳ್ ಹೊಸ ಚನ್ನಪಟ್ಟಣ   ಸಿರುಗುಪ್ಪ (ತಾ).   ಬಳ್ಳಾರಿ (ಜಿ) ಯಲ್ಲಿ ಯಾರು ಇಲ್ಲದವೇಳೆ ಗ್ಯಾಸ್ ಬ್ಲಾಸ್ಟ್ ದುರಂತವಗಿದೆ. ಮನೆಯಲ್ಲಿ ಇದ್ದ ಯಾಲ್ಲವಸ್ತು ಜೊತೆಗೆ 45ಸಾವಿರ ಕೂಲಿ ಮಾಡಿ ಕೂಡಿಯಿಟ್ಟ.. ಹಣ ಬಾಸ್ಮವಾಗಿದೆ. ಪ್ರತಿವಂದು ಕುಟುಂಬ ಜಾಗೃತರಗಿ...






1
2


3

4








Tuesday, September 7, 2021

ವಿಜಯನಗರ ಜಿಲ್ಲೆ:- ನಲ್ಲಾಪುರ ಗ್ರಾಮ ದಲ್ಲಿ ಗ್ಯಾಸ್ ಬ್ಲಾಸ್ಟ್ ದುರಂತ











ವಿಜಯನಗರ ಜಿಲ್ಲೆ:-  ನಲ್ಲಾಪುರ ಗ್ರಾಮ ದಲ್ಲಿ ಮದ್ಯಾನ 1ಗಂಟೆ ಸುಮಾರ್ ವತ್ತಿಗೆ ಗಾದಿಲಿಂಗಪ್ಪ ಅನ್ನೋ ಕುಟುಂಬಸ್ತಾರ ಮನೆಯಲ್ಲಿ ಗ್ಯಾಸ್ ಲಿಕ್ ಹಾಗಿ ಬ್ಲಾಸ್ಟ್ ಆಗಿ ಮನೆಯಲ್ಲಿ ಇರೋ ಯಲ್ಲಾ ಸಾಮಾನುಗಳು ಸುಟ್ಟು ಓಗಿವೆ ಆದ್ರೆ ಮನೆಯವರಿಗೆ ಯಾರಿಗೂ ಏನ್ ಆಗಿಲ್ಲ ಸರ್ಕಾರ ಇವರ ಮನೆಗೆ ಧನಸಹಾಯ ಮಾಡಬೇಕಾಗಿ ವಿನಂತಿ.....

ಭೈರವ✍️......

ವಿಜಯನಗರ ಜಿಲ್ಲೆ ಜನತೆಗೆ ಗುಡ್ ನ್ಯೂಸ್: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭ

ಬೆಂಗಳೂರು: ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ.
ಎರಡು ಹಂತಗಳಲ್ಲಿ ಹುದ್ದೆಗಳ ಸೃಜನೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಎಸ್.ಪಿ ಕಚೇರಿ, ಜಿಲ್ಲಾ ಆರೋಗ್ಯಾಧಿಕಾರಿ, ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ, ನಗರ ಯೋಜನೆ ಹಾಗೂ ಅರಣ್ಯ ಇಲಾಖೆಗಳ ಕಚೇರಿಗಳನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಂತ ಹಂತವಾಗಿ ಎಲ್ಲ ಕಚೇರಿಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದರಲ್ಲಿ ಕೆಲವು ಹುದ್ದೆಗಳನ್ನು ಬಳ್ಳಾರಿಯಿಂದ ಸ್ಥಳಾಂತರ ಮಾಡುವ ಮೂಲಕ ಹಾಗೂ ಕೆಲವು ಹುದ್ದೆಗಳ ಸೃಜನೆಯ ಮೂಲಕ ಜಿಲ್ಲಾ ಮಟ್ಟದ ಕಚೇರಿ ಸ್ಥಾಪಿಸಲಾಗುವುದು. ಜಿಲ್ಲಾ ಕಚೇರಿಗಳ ನಿರ್ಮಾಣಕ್ಕೆ ಕರ್ನಾಟಕ ಗೃಹಮಂಡಳಿಯ 83 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಅನುದಾನವನ್ನು ಎರಡು ಹಂತದಲ್ಲಿ ವರ್ಗಾಯಿಸಲಾಗುವುದು ಎಂದು ಅವರು ತಿಳಿಸಿದರು.
ಅನಗತ್ಯ ಸ್ಥಳ ವ್ಯರ್ಥ ಮಾಡದೆ, ಕಾರ್ಯನಿರ್ವಹಣೆಗೆ ಪೂರಕವಾಗಿ ಸುಸಜ್ಜಿತ ಜಿಲ್ಲಾಡಳಿತ ಭವನದ ನಕ್ಷೆ ರೂಪಿಸಲು ಸಿಎಂ ಸೂಚಿಸಿದರು.
ಬಳ್ಳಾರಿ ಜಿಲ್ಲೆಯ ಜಿಲ್ಲಾ ಖನಿಜ ನಿಧಿಗೆ ಸಂಬಂಧಿಸಿದಂತೆ ಈಗಾಗಲೇ 2023-24ರ ವರೆಗೆ ಅನುಮೋದನೆಯಾಗಿರುವ ಕ್ರಿಯಾಯೋಜನೆಯನ್ನು ಜಾರಿಗೊಳಿಸಲಾಗುವುದು. ನಂತರ ಜಿಲ್ಲಾ ಖನಿಜ ನಿಧಿಯನ್ನು ಎರಡೂ ಜಿಲ್ಲೆಗಳ ನಡುವೆ ಹಂಚಿಕೆ ಮಾಡುವ ಕುರಿತು ಒಂದು ಸೂತ್ರ ರೂಪಿಸಲಾಗುವುದು ಎಂದು ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ವಿಫುಲ ಅವಕಾಶವಿದ್ದು, ಹಂಪಿಯಲ್ಲಿ ಹಾಗೂ ಮತ್ತಿತರ ಪಾರಂಪರಿಕ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಆರ್ಕಿಯಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಲೋಕೋಪಯೋಗಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಿಜಯನಗರ ಜಿಲ್ಲೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಪಿ. ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
(ಮಾಹಿತಿ ಕೃಪೆ ಕನ್ನಡ ದುನಿಯಾ)