ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ( Chief Minister Relief Fund ) ರಾಜ್ಯದ ಅನೇಕರು ಜನಪ್ರತಿನಿಧಿಗಳ ಮೂಲಕ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ. ಇದು ಹಿಂದಿನಿಂದಲು ನಡೆಯುತ್ತಲೇ ಬಂದಿದೆ. ಬಡವರು, ನಿರ್ಗತಿಕರು ಹಾಗೂ ನೊಂದ ಜನತೆಗೆ ಈ ಸೌಲಭ್ಯದಡಿ ಅನುಕೂಲ ಕೂಡ ಆಗುತ್ತಿದೆ.
ಆದ್ರೇ ಇತ್ತೀಚಿಗೆ ಸಲ್ಲಿಕೆಯಾಗುತ್ತಿರುವಂತ ಅರ್ಜಿಗಳ ( Application ) ಜೊತೆಗೆ ಅನೇಕ ದಾಖಲೆಗಳನ್ನು ( Documents ) ಮಿಸ್ ಮಾಡಲಾಗುತ್ತಿದೆ. ಇದರಿಂದ ಕಡತ ವಿಲೇವಾರಿಗೆ ತೊಂದರೆ ಉಂಟಾಗುತ್ತಿದೆ ಅಂತ ತಿಳಿಸಿದ್ದು, ತಪ್ಪದೇ ಕೆಲ ಕಡ್ಡಾಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಕುರಿತಂತೆ ರಾಜ್ಯದ ಎಲ್ಲಾ ಸಚಿವ ಸಂಪುಟದ ಸಚಿವರು, ಲೋಕಸಭಾ, ರಾಜ್ಯ ಸಭಾ ಸದಸ್ಯರಿಗೆ, ವಿಧಾನಸಭಾ, ಪರಿಷತ್ ಸದಸ್ಯರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ಕೋರಿ, ಸಚಿವರು, ವಿಧಾನಸಭಾ, ಪರಿಷತ್ ಸದಸ್ಯರು, ಲೋಕಸಬಾ, ರಾಜ್ಯಸಭಾ ಸದಸ್ಯರ ಕಚೇರಿಗಳಿಂದ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ.
ಬಹುತೇಕ ಅರ್ಜಿಗಳು ಸಮರ್ಪಕವಲ್ಲದ ದಾಖಲೆಗಳೊಂದಿಗೆ ಸಲ್ಲಿಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇದರಿಂದ ಶೀಘ್ರಗತಿಯಲ್ಲಿ ಕಡತ ವಿಲೇವಾರಿ ಮಾಡಲು ತೊಂದರೆಯಾಗುತ್ತಿದ್ದು, ಬಡವರು, ನಿರ್ಗತಿಕರು ಹಾಗೂ ನೊಂದ ಜನರಿಗೆ ಸಕಾಲದಲ್ಲಿ ಪರಿಹಾರ ನೀಡಲು ವಿಳಂಬವಾಗುತ್ತಿರುವುದರಿಂದ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮುಖ್ಯ ಉದ್ದೇಶ ಈಡೇರಿದಂತೆ ಆಗುತ್ತಿಲ್ಲ.
ಈ ಹಿನ್ನಲೆಯಲ್ಲಿ, ತಾವು ಇನ್ಮುಂದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವಾಗ, ಕಡ್ಡಾಯವಾಗಿ ಈ ಕೆಳಕಂಡ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿ ಅರ್ಜಿ ಜೊತೆಗೆ ಸಲ್ಲಿಸಬೇಕಾದ ದಾಖಲೆಗಳು
- ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಅರ್ಜಿದಾರರ ಬಿಪಿಎಲ್, ಪಡಿತರ ಚೀಟಿ
- ಆಧಾರ್ ಗುರುತಿನ ಚೀಟಿ. ಖ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಆಗಿರಬೇಕು.
- ಅರ್ಜಿದಾರರು ಚಿಕಿತ್ಸೆ ಪಡೆದಿದ್ದಲ್ಲಿ, ಚಿಕಿತ್ಸೆ ಪಡೆದಿರುವ ಆಸ್ಪತ್ರೆಯ ಮೋಹರು ಮತ್ತು ಸಹಿಯೊಂದಿರುವ ಆಸ್ಪತ್ರೆಯ ಅಂತಿಮ ಮೂಲ ಬಿಲ್ಲು
- ಆಸ್ಪತ್ರೆಯ ಬಿಡುಗಡೆ ಸಾರಾಂಶ ಪತ್ರ
- ಚಿಕಿತ್ಸೆ ಪಡೆಯಬೇಕಾದಲ್ಲಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚದ ಅಂದಾಜು ಪಟ್ಟಿ
- ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಮೊದಲ ಪುಟದ ಜೆರಾಕ್ಸ್ ಪ್ರತಿ
- ಅರ್ಜಿದಾರರ ಅಥವಾ ಕುಟುಂಬ ವರ್ಗದ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ