ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಸಿಹಿಸುದ್ದಿ ನೀಡಿದ್ದು, ಅರ್ಹ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಲ್.ನಾಗೇಂದ್ರ ಪ್ರಶ್ನೆಗೆ ಉತ್ತರಿಸಿದ ಅವರು, ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಪೈಕಿ ಅರ್ಹ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಪ್ರಕಗತಿಯಲ್ಲಿದ್ದು, ಅರ್ಜಿಗಳ ಪರಿಶೀಲನೆ ನಡೆಸಿ ಆದ್ಯತೆ ಮೇರೆಗೆ ಪಡಿತರ ಚೀಟಿ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯ ನಿಧಾನವಾಗಿತ್ತು. ಈ ಅವಧಿಯಲ್ಲಿ ಬಯೋಮೆಟ್ರಿಕ್ ಬಳಕೆ ಹಿಂಪಡೆದ ಕಾರಣ ಪಡಿತರ ಚೀಟಿ ವಿತರಣೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಆರಂಭವಾಗಲಿದೆ.
ಕನ್ನಡ news now
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ