WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, May 23, 2023

ರೈತರೇ ಗಮನಿಸಿ : `ಪಿಎಂ ಕಿಸಾನ್ ಯೋಜನೆ’ಗೆ `ಇ-ಕೆವೈಸಿ’ ಮಾಡಿಸಲು ಕೊನೆಯ ಅವಕಾಶ





ಚಿತ್ರದುರ್ಗ : ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆಯಾಗುತ್ತಿದ್ದು, ಈ ಕುರಿತು ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಇದು ಕೊನೆಯ ಅವಕಾಶ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್ ಜಿಲ್ಲೆಯ ರೈತರಿಗೆ ಮನವಿ ಮಾಡಿದ್ದಾರೆ.


ಈಗಾಗಲೇ ಅನೇಕ ಬಾರಿ ಮನವಿ ಮಾಡಿದರೂ ಕೆಲವು ರೈತರು ಇ-ಕೆವೈಸಿ ಮಾಡಿಸಿರುವುದಿಲ್ಲ. ಅರ್ಹ ರೈತ ಫಲಾನುಭವಿಯು http://pmkisan.gov.in ವೈಬ್ಸೈಟ್‍ಗೆ ಭೇಟಿ ನೀಡಿ, ಆಧಾರ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ನೋಂದಾಣೆಯಾಗದ ರೈತರು ಅಥವಾ ಓಟಿಸಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಸಮಾನ್ಯ ಸೇವಾ ಕೇಂದ್ರಕ್ಕೆ (csc) ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಭೇಟಿ ನೀಡಿ, ಮಾಹಿತಿ ಪಡೆದು ಇ-ಕೆವೈಸಿ ನೋಂದಾಯಿಸಲು ಜಂಟಿ ಕೃಷಿ ನಿರ್ದೇಶಕ ಪಿ. ರಮೇಶಕುಮಾರ್ ತಿಳಿಸಿದ್ದಾರೆ.

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ