WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, May 23, 2023

CM Warning : ಹಿಂದಿನ ಸರ್ಕಾರದಲ್ಲಿ ಮಾಡಿದ ತಪ್ಪು ಮತ್ತೆ ಮಾಡಬೇಡಿ : ಪೊಲೀಸರಿಗೆ ‘ಸಿಎಂ ಸಿದ್ದರಾಮಯ್ಯ’ ಖಡಕ್ ಸೂಚನೆ


 


ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತ್ರ, ಈಗ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


ಹಿಂದಿನ ಸರ್ಕಾರದಲ್ಲಿ ಮಾಡಿದ ತಪ್ಪು ಮತ್ತೆ ಮಾಡಬೇಡಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ನೀವು ಏನು ಮಾಡಿದ್ದೀರಿ ಎಂಬುದು ಗೊತ್ತು, ಆ ತಪ್ಪು ಮತ್ತೆ ಆಗಬಾರದು. ರೌಡಿಸಂ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಯಾರಿಗೂ ತಾರತಮ್ಯ ಮಾಡದೇ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಎಂ.ಪಿ. ಪಾಟೀಲ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಡಿಸಿಎಂ ಡಿ.ಕೆ ಶಿವಕುಮಾರ್ ತರಾಟೆ

ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು..? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡೊಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತರಾಟೆಗೆ ತೆಗೆದುಕೊಂಡರು.

ಇಂದು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದಂತ ಅವರು, PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ ಓಎಂಆರ್ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹರಾಸ್ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ.? ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು ಮಾಡಿದ್ದೀರ ನೀವು. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು ಎಂಬುದಾಗಿ ಎಚ್ಚರಿಕೆ ನೀಡಿದರು.

ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯೊಲ್ಲ. ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿದ್ರಿ. ಅವರನ್ನು ಹರಾಸ್ ಮಾಡಿದ್ರಿ. ನಮ್ಮನ್ನೇ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ? ಆದರೆ ಎದುರು ಪಾರ್ಟಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಕುಣಿದ್ರಿ ಎಂದು ಕಿಡಿಕಾರಿದರು.ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ ನೀವು. ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಅಂತ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ವಾಚ್ ಮಾಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯೊಲ್ಲ. ನೀವು ಬದಲಾಗಬೇಕು. ನಿಮ್ಮ ವರ್ತನೆ ಬದಲಾಗಬೇಕು. ಇಲ್ಲ ಅಂದ್ರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ. ನಾವು ದ್ವೇಷ ಸಾಧಿಸೋದಿಲ್ಲ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ. ಜನರ ನೆಮ್ಮದಿ ಕಾಪಾಡಿ ಎಂದು ಖಡಕ್ ಸೂಚನೆ ನೀಡಿದರು.ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ನೀಡಿ ಎಂದು ತಿಳಿಸಿದರು.


No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ