ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಸೋನು ನಿಗಮ್ ಇದನ್ನು ಇಲ್ಲಿಗೆ ಮುಗಿಸೋಣ ಎಂದ ಕರವೇ ನಾರಾಯಣಗೌಡ
ಕನ್ನಡ ಭಾಷೆ ಕುರಿತು ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದ ಖ್ಯಾತ ಗಾಯಕ ಸೋನು ನಿಗಮ್ ಈಗ ಕನ್ನಡಿಗರಲ್ಲಿ ಮತ್ತೆ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಲಿಸಿದ್ದಾರೆ
ಗಾಯಕ ಸೋನು ನಿಗಮ್ ಇಂದು ನನ್ನೊಂದಿಗೆ ಮಾತಾನಡಿದರು. ತಾವು ಹಿಂದೆ ಮಾಡಿದ ಒಂದು ಮಾತು ಕನ್ನಡಿಗರನ್ನು ಹೇಗೆ ನೋಯಿಸಿದೆ ಎಂಬುದು ಅವರಿಗೆ
ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸಿವುದಾಗಿ ಅವರು ಹೇಳಿದರು.
ನಾನು ಹಿಂದೆಯೂ ಹೇಳಿದ್ದೇನೆ. ನಾವೆಲ್ಲರೂ ಸೋನು ನಿಗಮ್ ಅವರ ಹಾಡುಗಳನ್ನು ಇಷ್ಟಪಟ್ಟವರು. ಅವರ ಕುರಿತು ವೈಯಕ್ತಿಕವಾಗಿ ಯಾವ ದ್ವೇಷ
ಮುನಿಸು ನಮಗೆ ಇರಲಿಲ್ಲ. ಆ ಒಂದು ಮಾತನ್ನು ಅರಗಿಸಿಕೊಳ್ಳಲು ನಮ್ಮಿಂದ ಆಗಿರಲಿಲ್ಲ. ಅದಕ್ಕಾಗಿ ನಮ್ಮ ಪ್ರತಿಭಟನೆ. ಆಕ್ರೊಶ ಸಹಜವಾಗೆ ಇತ್ತು.
ಇದೀಗ ಅವರು ಕ್ಷಮೆ ಯಾಚಿಸಿದ್ದಾರೆ. ಇಲ್ಲಿಗೆ ಇದನ್ನು ಮುಗಿಸುವುದು ಒಳ್ಳೆಯಾದು. ಕ್ಷಮೆ ಕೇಳಿದವರನ್ನು ಕ್ಷಮಿಸುವುದು ಕನ್ನಡಿಗರ ಔದಾರ್ಯ

No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ