WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, June 30, 2020

ಸಂಪೂರ್ಣ ಕಾರ್ಯ ನಿಲ್ಲಿಸಿದ ಟಿಕ್​ಟಾಕ್​: ಈಗಾಗ್ಲೇ ಇನ್ಸ್ಟಾಲ್​ ಆಗಿರೋ ಆಯಪ್​ ಸಹ ವರ್ಕ್​ ಆಗ್ತಿಲ್ಲ

ನವದೆಹಲಿ: ಲಡಾಖ್​ ಗಡಿ ಸಂಘರ್ಷದ ಬೆನ್ನಲ್ಲೇ ಭಾರತ ಸರ್ಕಾರ ಚೀನಾಗೆ ಡಿಜಿಟಲ್​ ತಿರುಗೇಟು ನೀಡಿದ್ದು, ತುಂಬಾ ಪ್ರಖ್ಯಾತಿ ಪಡೆದಿದ್ದ ಟಿಕ್​ಟಾಕ್​ ಸೇರಿದಂತೆ ಚೀನಾ ನಿರ್ಮಿತ 59 ಆಯಪ್​ಗಳನ್ನು ಸೋಮವಾರ ಬ್ಯಾನ್​ ಮಾಡಿದೆ.
ಬ್ಯಾನ್​ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಗೂಗಲ್​ ಆಯಂಡ್​ ಆಯಪಲ್​ ಆಯಪ್​ ಸ್ಟೋರ್​ನಿಂದ ಟಿಕ್​ಟಾಕ್​ ಆಯಪ್​ ಅನ್ನು ಕಿತ್ತೊಗೆಯಲಾಯಿತು. ಆದರೆ, ಈಗಾಗಲೇ ಡೌನ್​ಲೋಡ್​ ಮಾಡಿಕೊಂಡು ಇನ್​ಸ್ಟಾಲ್ ಮಾಡಲಾಗಿದ್ದ​ ಟಿಕ್​ಟಾಕ್​ ಆಯಪ್ ಮಾತ್ರ​ ಕಾರ್ಯನಿರ್ವಹಿಸುತ್ತಿತ್ತು.
ಆದರೆ, ಅದು ಕೂಡ ಹೆಚ್ಚಿನ ಸಮಯ ಉಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ಟಿಕ್​ಟಾಕ್​ ಆಯಪ್​ ಇದೀಗ ಸಂಪೂರ್ಣ ಆಫ್​ಲೈನ್​ಗೆ ಹೋಗಿದೆ. ನೀವು ಟಿಕ್​ಟಾಕ್​ ಆಯಪ್​ ಓಪನ್​ ಮಾಡಿದರೆ 59 ಆಯಪ್​ಗಳನ್ನು ಬ್ಯಾನ್​ ಮಾಡಿದ ಸರ್ಕಾರದ ಆದೇಶದ ಕುರಿತ ಸೂಚನೆಯನ್ನು ತೋರಿಸುತ್ತದೆ. ಅದರ ಸಾರ ಈ ಕೆಳಕಂಡಂತಿದೆ.
ಆತ್ಮೀಯ ಬಳಕೆದಾರರೆ, 2020, ಜೂನ್​ 29ರಂದು ಭಾರತ ಸರ್ಕಾರ ಟಿಕ್​ಟಾಕ್​ ಸೇರಿದಂತೆ 59 ಆಯಪ್​ಗಳನ್ನು ಬ್ಯಾನ್​ ಮಾಡುವ ನಿರ್ಧಾರ ತೆಗೆದುಕೊಂಡಿತು. ನಾವು ಭಾರತ ಸರ್ಕಾರದ ನಿರ್ದೇಶನವನ್ನು ಪಾಲಿಸುವ ಪ್ರಕ್ರಿಯೆಯಲ್ಲಿದ್ದೇವೆ. ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ಕ್ರಮವನ್ನು ತಿಳಿದುಕೊಳ್ಳಲು ಸರ್ಕಾರದೊಂದಿಗೆ ಕೆಲಸ ಮಾಡುತ್ತಿದ್ದೇವೆ. ಭಾರತದಲ್ಲಿ ನಮ್ಮ ಎಲ್ಲ ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸುವುದು ನಮ್ಮ ಆದ್ಯತೆಯಾಗಿ ಉಳಿದಿದೆ ಎಂದು ತಿಳಿಸಿದೆ. ಟಿಕ್​ಟಾಕ್​ನ ಅಧಿಕೃತ ವೆಬ್​ಸೈಟ್​ ಸಹ ದೀರ್ಘಕಾಲ ಉಳಿದಿಲ್ಲ. ಇದೀಗ ಟಿಕ್​ಟಾಕ್​. ಕಾಮ್​ (tiktok.com) ವೆಬ್​ಸೈಟ್​ ಓಪನ್​ ಮಾಡಿದರೆ, ಪೇಜ್​ ನಾಟ್​ ಫೌಂಡ್​ ಎಂಬ ಸಂದೇಶದೊಂದಿಗೆ ಮೇಲಿನ ಸೂಚನೆಯನ್ನು ಸಹ ತೋರಿಸುತ್ತಿದೆ. (ಏಜೆನ್ಸೀಸ್​)
(ಮಾಹಿತಿ ಕೃಪೆ ವಿಜಯವಾಣಿ)

ಕುರಿಗಾಯಿಗೂ ಕೊರೋನಾ ಶಂಕೆ : ಮೇಕೆಗಳಿಗೆ ಕ್ವಾರಂಟೈನ್.?

ತುಮಕೂರು : ಈಗಾಗಲೇ ಹಸು, ಧನಗಳಿಗೆ ಕೊರೋನಾ ಸೋಂಕಿನ ಪ್ರಕರಣಗಳು ಅಲ್ಲಲ್ಲಿ ವರದಿಯಾಗಿವೆ. ಇದರ ಬೆನ್ನಲ್ಲೆ ಕುರಿಗಾಯಿಯೊಬ್ಬರಿಗೆ ಕೊರೋನಾ ಶಂಕೆ ವ್ಯಕ್ತವಾಗಿದ್ದು, ಈತ ಕಾಯುತ್ತಿದ್ದಂತ ಮೇಕೆಗಳಿಗೂ ಕೊರೋನಾ ಸೋಂಕು ತಗುಲಿದ್ಯಾ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಹೀಗಾಗಿ ಮೇಕೆಗಳನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸುವಂತ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ. ಅಲ್ಲದೇ ಕುರಿಗಾಯಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿನ ಕುರಿಗಾಯಿ ವ್ಯಕ್ತಿಯೊಬ್ಬ ಜ್ವರದಿಂದ ಬಳಲುತ್ತಿದ್ದರು. ಇದೇ ಕಾರಣದಿಂದಾಗಿ ಆಸ್ಪತ್ರೆಗೂ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಈತ ಕಾಯುತ್ತಿದ್ದಂತ ಮೇಕೆಗಳಿಗೂ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಮೇಕೆಗಳನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.
ಇನ್ನೂ ಜ್ವರದಿಂದ ಬಳಲುತ್ತಿದ್ದಂತ ಕುರಿಗಾಯಿ ವ್ಯಕ್ತಿಯ ಸ್ನೇಹಿತನ 5 ಮೇಕೆಗಳು ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು ಎಂದು ತಿಳಿದು ಬಂದಿದೆ. ಈ ಎಲ್ಲಾ ಕಾರಣದಿಂದಾಗಿ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿದ್ದಂತ ಕುರಿಗಾಯಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರೇ, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮೇಕೆಗಳನ್ನು ಕೊರೋನಾ ಸೋಂಕಿನ ಶಂಕೆಯಿಂದ ಕ್ವಾರಂಟೈನ್ ಮಾಡಲಾಗುತ್ತಿದೆ. ಕೊರೋನಾ ಸೋಂಕು ಪತ್ತೆ ಪರೀಕ್ಷೆಗೂ ಒಳಪಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
(ಮಾಹಿತಿ ಕೃಪೆ  Kannada News Now)

Saturday, June 20, 2020

ಕುಡುಕರೇ ಎಚ್ಚರ: ಎಣ್ಣೆ ಗುಂಗಲ್ಲಿ ಅವಧಿ ಮುಗಿದ ಬಿಯರ್‌ ಕುಡಿದ್ರೆ ಮುಗೀತು ಕಥೆ..!

ಶಿವಕುಮಾರ ಕುಷ್ಟಗಿ
ಗದಗ(ಜೂ.20): ನಗರ ಸೇರಿದಂತೆ ಜಿಲ್ಲೆಯಲ್ಲಿ ಬಾರ್‌ಗಳಲ್ಲಿ ಲಾಕ್‌ಡೌನ್‌ನಲ್ಲಿ ಸ್ಟಾಕ್‌ ಉಳಿದು ಅವಧಿ ಮುಗಿದ ಬೀಯರ್‌ ಮಾರಾಟ ಮಾಡಲಾಗುತ್ತಿದೆ. ಅದೂ ಎಂಆರ್‌ಪಿ ದರಕ್ಕಿಂತ ಶೇ.25 ರಷ್ಟು ಹೆಚ್ಚಿನ ಬೆಲೆಗೆ. ಇಂಥ ಬಿಯರ್‌ ಕುಡಿದವರ ಆರೋಗ್ಯ ದೇವರಿಗೇ ಪ್ರೀತಿ ಎನ್ನುವಂತಾಗಿದೆ.
ನಗರದ ಹೃದಯ ಭಾಗದಲ್ಲಿರುವ ಬಾರ್‌ಗಳಲ್ಲಿಯೇ ಹೀಗೆ ಅವಧಿ ಮುಗಿದ ಬೆಡ್‌ವೈಜರ್‌ ಕಂಪನಿಯ ಬಿಯರ್‌ ಬಾಟಲ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. 2019 ರ ಡಿಸೆಂಬರ್‌ 17 ರಂದು ಈ ಬಿಯರ್‌ ತಯಾರಾಗಿದ್ದು ಅವಧಿ ಮುಗಿಯುವುದು ಜೂನ್‌ 13, 2020 ಎಂದು ನಮೂದಿಸಲಾಗಿದೆ. ಆದರೆ ಇಲ್ಲಿನ ಬಹುತೇಕ ಬಾರ್‌ಗಳಲ್ಲಿ ಜೂನ್‌ 19ರವರೆಗೂ ಅದೇ ಬೀಯರ್‌ನ್ನೇ ಮಾರಾಟ ಮಾಡುತ್ತಿದ್ದಾರೆ.
ಸಾವು ಸಂಭವಿಸುತ್ತದೆ:
ಈ ರೀತಿ ಅವಧಿ ಪೂರ್ಣಗೊಂಡಿರುವ ಬಿಯರ್‌ ಮಾರಾಟ ಮಾಡುವುದರಿಂದ ಮದ್ಯಪ್ರಿಯರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಕೆಲವೊಮ್ಮೆ ಸಾವು ಕೂಡಾ ಸಂಭವಿಸುವ ಸಾಧ್ಯತೆ ಇರುತ್ತದೆ. ಇದಕ್ಕಾಗಿಯೇ ಕಂಪನಿಗಳು ಅದರ ಮೇಲೆ ಅವಧಿಯನ್ನು ನಮೂದಿಸಿರುತ್ತಾರೆ. ಆದರೆ ಇಲ್ಲಿನ ಮದ್ಯದ ಅಂಗಡಿಗಳ ಮಾಲೀಕರು ಮಾತ್ರ ಕೇವಲ ಹಣ ಬಂದರೆ ಸಾಕು ಎನ್ನುವ ರೀತಿಯಲ್ಲಿ ವರ್ತಿಸುತ್ತಾ, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.
ಭಾರತೀಯ ಯೋಧರನ್ನ ಚೀನಾ ಕೊಲ್ಲಲಿ ಎಂದಿದ್ದ ದೇಶದ್ರೋಹಿಯ ಬಂಧನ
ಶೇ. 25 ರಷ್ಟು ಹೆಚ್ಚಿಗೆ ವಸೂಲಿ:
ಜಿಲ್ಲೆಯಾದ್ಯಂತ ಇರುವ ಎಲ್ಲಾ ಬಾರ್‌ಗಳಲ್ಲಿ ಸರ್ಕಾರ ಅಬಕಾರಿ ಇಲಾಖೆ ಮೂಲಕ ನಿಗದಿ ಪಡಿಸಿದ ದರಕ್ಕಿಂತಲೂ ಶೇ. 25ರಷ್ಟುಹೆಚ್ಚಿಗೆ ಹಣ ಪಡೆಯುತ್ತಾರೆ. ಇದನ್ನು ಪ್ರಶ್ನೆ ಮಾಡಿದರೆ ನಿಮಗೆ ಬೇಕೋ? ಬೇಡವೋ? ನಾವು ಮಾರುವುದು ಇಷ್ಟಕ್ಕೆ ಎಂದು ಮದ್ಯಪ್ರೀಯರನ್ನೇ ಗದರಿಸಿ ಕಳಿಸುವ ಮಟ್ಟಕ್ಕೆ ಬಾರ್‌ ಮಾಲೀಕರು ಬಂದಿದ್ದಾರೆ.
ಜಾಣ ಕುರುಡುತನ
ಜಿಲ್ಲಾ ಅಬಕಾರಿ ಇಲಾಖೆಗೆ ಇದೆಲ್ಲಾ ಗೊತ್ತಿಲ್ಲ ಎಂದೇನಿಲ್ಲ, ಇಂಚಿಂಚು ಮಾಹಿತಿ ಕೂಡಾ ಗೊತ್ತಿದೆ. ಆದರೆ ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ವರ್ತಿಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಅವರಿಗೂ ಸಲ್ಲಿಕೆಯಾಗಬೇಕಾದದ್ದು ಬಂದು ಬೀಳುವ ಕಾರಣಕ್ಕಾಗಿ ಅವರೆಲ್ಲಾ ಯಾರ ಮೇಲೆ ಕ್ರಮ ತೆಗೆದುಕೊಳ್ಳುವ ಗೋಜಿಗೆ ಹೋಗದೇ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ ಎನ್ನುವುದು ಗುರುವಾರ ರಾತ್ರಿ ಅವಧಿ ಮುಗಿದ ಬೀಯರ್‌ ಪಡೆದು ಪರದಾಡಿ, ಬಾರ್‌ ಅಂಗಡಿ ಮಾಲೀಕರಿಂದ ಬೈಗುಳ ತಿಂದು, ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ಮದ್ಯಪ್ರಿರೊಬ್ಬರು.
(ಮಾಹಿತಿ ಕೃಪೆ ಸುವರ್ಣ ನ್ಯೂಸ್)

ಕಟ್ಟಡ, ಮನೆ ನಿರ್ಮಿಸುವವರಿಗೆ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ಅತಿ ಕಡಿಮೆ ದರಕ್ಕೆ ಮರಳು ಸಿಗುವ ವ್ಯವಸ್ಥೆ ರೂಪಿಸಲಾಗಿದೆ. ರಾಜ್ಯದಲ್ಲಿ ಮರಳು ನೀತಿ ಜಾರಿಯಾದ ನಂತರ ನೈಸರ್ಗಿಕ ಮರಳಿಗೆ ಏಕರೂಪ ದರ ನಿಗದಿಪಡಿಸಲು ಸಿದ್ಧತೆ ನಡೆದಿದೆ. ಅಲ್ಲದೇ ಮರಳು ಸಾಗಣೆಗೂ ಕೂಡ ಏಕರೂಪ ದರ ನಿಗದಿಪಡಿಸಲು ಕ್ರಮಕೈಗೊಳ್ಳಲಾಗಿದ್ದು ಮಧ್ಯವರ್ತಿಗಳ ಹಾವಳಿ ಇಲ್ಲದೇ ಖರೀದಿದಾರರಿಗೆ ಬೇಕಾದಷ್ಟು ಮರಳನ್ನು ನಿಗದಿತ ದರದಲ್ಲಿ ಪಡೆಯಲು ವ್ಯವಸ್ಥೆ ಮಾಡಲಾಗುವುದು.
ಗುರುತಿಸಲಾದ ಮರಳು ಬ್ಲಾಕ್ ಗಳಲ್ಲಿ ಪ್ರತಿಟನ್ ಗೆ 700 ರೂ., ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 300 ರೂಪಾಯಿ ದರ ನಿಗದಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸರ್ಕಾರದ ಮಟ್ಟದಲ್ಲಿ ಮರಳು ದರ ನಿಗದಿಗೆ ಚರ್ಚೆ ನಡೆದಿದ್ದು ಒಂದು ವೇಳೆ ದರ ನಿಗದಿಯಾದಲ್ಲಿ ಎಂಎಸ್‌ಐಎಲ್ ಮಾರಾಟ ಮಾಡುವ ಮಲೇಷ್ಯಾ ಮರಳಿಗಿಂತಲೂ ಕಡಿಮೆ ದರದಲ್ಲಿ ನೈಸರ್ಗಿಕ ಮರಳು ಸಿಗಲಿದೆ ಎನ್ನಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ ನಡುವೆ ಮಹತ್ವದ ಚರ್ಚೆ ನಡೆದಿದ್ದು ಗ್ರಾಹಕರಿಗೆ ಹೊರೆಯಾಗದಂತೆ ಮರಳಿನ ದರ ಮತ್ತು ಸಾಗಣೆ ವೆಚ್ಚವನ್ನು ನಿಗದಿ ಮಾಡಿ ಗ್ರಾಹಕರಿಗೆ ಅನುಕೂಲಕರವಾದ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.
(ಮಾಹಿತಿ ಕೃಪೆ ಕನ್ನಡದುನಿಯಾ)

Friday, June 19, 2020

2020-21ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಶುಲ್ಕ ಏರಿಸುವಂತಿಲ್ಲ : ಸರ್ಕಾರ ಆದೇಶ

ಬೆಂಗಳೂರು : 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಏರಿಸುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರ ಆದೇಶ‌ಲಾಕ್​ಡೌನ್​ ಹಿನ್ನೆಲೆ ಕೈಗಾರಿಕೆಗಳು ಹಾಗೂ ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿದ್ದು, ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ.‌
ಈ ಹಿನ್ನೆಲೆ ಅನುದಾನ ರಹಿತ ಶಾಲೆಗಳ ಪೋಷಕರು ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಹೆಚ್ಚಿಸದಂತೆ ಶಾಲಾ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸರ್ಕಾರಕ್ಕೆ ಸಾಕಷ್ಟು ಮನವಿಗಳನ್ನು ಸಲ್ಲಿಸಿದ್ದಾರೆ.‌
ಈ ಹಿನ್ನೆಲೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸದ್ಯ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ-1983, ಸೆಕ್ಷನ್-133, ಉಪ ನಿಯಮ-(2)ರ ಅಡಿಯಲ್ಲಿ, ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಬೋಧನಾ ಶುಲ್ಕವನ್ನು ಹೆಚ್ಚಿಸಬಾರದೆಂದು ಸೂಚಿಸಿದೆ.
ಒಂದು ವೇಳೆ ಶಾಲಾ ಆಡಳಿತ ಮಂಡಳಿಯವರು 2019-20ನೇ ಶೈಕ್ಷಣಿಕ ಸಾಲಿಗಿಂತ ಹೆಚ್ಚಿನ ಬೋಧನಾ ಶುಲ್ಕವನ್ನು ಮಕ್ಕಳು/ಪೋಷಕರಿಂದ ಸಂಗ್ರಹಿಸಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-124[ಎ]ರ ಅಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಈ ಮೂಲಕ ಸೂಚಿಸಿದೆ.
(ಮಾಹಿತಿ ಕೃಪೆ ಈ ಸಂಜೆ)

BIG NEWS : "ಎಲ್ಲದಕ್ಕೂ ನಾವು ರೆಡಿ, ಒಂದಿಚೂ ಜಾಗ ಬಿಟ್ಟುಕೊಡಲ್ಲ" : ಕುತಂತ್ರಿ ಚೀನಾಗೆ ಮೋದಿ ವಾರ್ನಿಂಗ್..!

ನವದೆಹಲಿ : ಯಾವುದೇ ಕಾರಣಕ್ಕೂ ದೇಶದ ಒಂದೇ ಒಂದು ಇಂಚು ಜಾಗವನ್ನು ಬಿಟ್ಡುಕೊಡುವ ಪ್ರಶ್ನೆಯೇ ಇಲ್ಲ ಎಂದು ನೇರವಾಗಿಯೇ ಚೀನಾಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ರಾಷ್ಟ್ರದ ಪ್ರತಿಯೊಂದು ಭಾಗವನ್ನು ಯಾವುದೇ ಬೆಲೆ ತೆತ್ತದಾರೂ ಸರಿಯೇ. ದೇಶದ ರಕ್ಷಣಾ ವಿಷಯದಲ್ಲಿ ನಾವು ಯಾರ ಜೊತೆಯೂ ಸಂಧಾನ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸರ್ವ ಪಕ್ಷಗಳ ಸಭೆಯ ನಂತರ ರಾಷ್ಟವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ತಾಯ್ನಾಡಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿರುವ ವೀರ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ಚೀನಾಕ್ಕೆ ಎಚ್ಚರಿಕೆ ಕೊಟ್ಟರು.
ಗಡಿಯಲ್ಲಿ ಈಗ ಮೂಲಸೌಕರ್ಯಗಳನ್ನು ನಿರ್ಮಿಸಲಾಗುತ್ತದೆ.
ರಾಷ್ಟ್ರ ಹಿತ, ದೇಶವಾಸಿಗಳ ಹಿತವೇ ನಮಗೆ ಮುಖ್ಯ. ಭಾರತ ಶಾಂತಿ ಮತ್ತು ಸ್ನೇಹವನ್ನು ಚಾಚುತ್ತದೆ.
ಎಲ್ಲಕ್ಕಿಂತ ಮುಖ್ಯವಾಗಿ ನಮಗೆ ದೇಶದ ಸಾರ್ವಭೌಮತೆಯೇ ಮುಖ್ಯ. ಸೇನೆಗೆ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ಗಳು, ಕ್ಷಿಪಣಿಗಳು ಸೇರಿವೆ. ಭೂ, ವಾಯು, ನೌಕಾ ದಳಗಳು ಯಾವುದೇ ದಾಳಿಯನ್ನು ಎದುರಿಸಲು ನಾವು ಸಮರ್ಥವಾಗಿದ್ದೇವೆ ಎಂದು ತಿಳಿಸಿದರು.
ಅಗತ್ಯ ಕ್ರಮಗಳನ್ನಯ ತೆಗೆದುಕೊಳ್ಳಲು ನಮ್ಮ ಸೇನೆಗೆ ಪೂರ್ತಿ ಸ್ವಾತಂತ್ರ್ಯ ನೀಡಲಾಗಿದೆ. ನಮ್ಮ ಸೇನಾ ಪಡೆಗಳು ನಮ್ಮ ಗಡಿಗಳನ್ನು ರಕ್ಷಿಸುವ ಪೂರ್ಣ ಸಾಮರ್ಥ್ಯ ಹೊಂದಿವೆ. ಸೈನಿಕರ ಬೆಂಬಲಕ್ಕೆ ಇಡೀ ದೇಶ ಇರಲಿದೆ ಎಂಬ ಭರವಸೆಯನ್ನು ಯೋಧರಿಗೆ ನಾನು ನೀಡುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಎಲ್‌ಎಸಿ ಬಳಿ ಸೇನೆಯ ಗಸ್ತು ಹೆಚ್ಚಿಸಲಾಗಿದೆ. ನಮ್ಮ ದೇಶ ಸುಭದ್ರವಾಗಿದ್ದು ಯಾರು ಭಯ ಪಡಬೇಕಾದ ಅಗತ್ಯವಿಲ್ಲ. ರಾಷ್ಟ್ರೀಯ ಸುರಕ್ಷತೆಯೇ ನಮ್ಮ ಆಧ್ಯತೆಯಾಗಿದೆ ಎಂದು ನಾನು ಆಶ್ವಾಸನೆ ನೀಡುತ್ತಿದ್ದೇನೆ ಎಂದು ಮೋದಿ ತಿಳಿಸಿದರು.
ಭಾರತದ ಗಡಿಯ ಒಳಗಡೆ ಚೀನಾದವರು ಬಂದಿಲ್ಲ. ಭಾರತ ಮಾತೆಯನ್ನು ಎದುರು ಹಾಕಿದವರಿಗೆ ನಮ್ಮ ಸೈನಿಕರು ಪಾಠ ಕಲಿಸಿ ಬಲಿದಾನ ಮಾಡಿದ್ದಾರೆ. ನಮ್ಮ ಸೈನಿಕರು ಏನು ಮಾಡಬೇಕೋ ಅದನ್ನು ಸರಿಯಾಗಿ ಮಾಡುತ್ತಿದ್ದಾರೆ. ಕ್ರಿಯೆ ತಕ್ಕ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಮೋದಿ ಸರ್ವ ಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ.
ಆರ್‌ಜೆಡಿ ಮತ್ತು ಆಪ್ ಹೊರತು ಪಡಿಸಿ ಎಲ್ಲಾ ಪಕ್ಷಗಳ ನಾಯಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು. ಈ ವೇಳೆ, ಪಕ್ಷಗಳ ನಾಯಕರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮತ್ತು ವಿದೇಶಾಂಗ ಸಚಿವ ಜೈಶಂಕರ್ ವಿವರಣೆ ನೀಡಿದರು.
ಬಳಿಕ ಎಲ್ಲಾ ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯ ಮಂಡಿಸಿದ್ರು. ಗಡಿ ವಿಚಾರವಾಗಿ ಬಹುತೇಕ ನಾಯಕರು ಸರ್ಕಾರಕ್ಕೆ ವಿಶ್ವಾಸ ತುಂಬಿದ್ದಾರೆ. ಭಾರತದ ಸರ್ವಪಕ್ಷ ಸಭೆ ಬೆನ್ನಲ್ಲೇ ಮಾಡೋದನ್ನೆಲ್ಲಾ ಮಾಡಿರುವ ಚೀನಾ ಈಗ ಶಾಂತಿ ಮಂತ್ರ ಜಪಿಸುತ್ತಿದೆ. ಪರಿಸ್ಥಿತಿ ಬಿಗಡಾಯಿಸೋದು ಬೇಡ. ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆ ಆಗಬಹುದು ಎಂದು ಹೇಳಿದೆ.
ಮೋದಿ ಭಾಷಣದ ಆರಂಭದಲ್ಲಿ ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ಭಾನುವಾರ ಎಲ್ಲರೂ ಮನೆಯಲ್ಲೇ ಕುಟುಂಬದವರ ಜೊತೆ ಯೋಗ ಮಾಡಿ. ಕೊರೊನಾ ವಿರುದ್ಧ ಹೋರಾಡಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಬೇಕಾಗುತ್ತದೆ. ಯೋಗದಿಂದ ರೋಗ ನಿರೋಧಕ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಮೊದಲಿಗರಾಗಿ ಮಾತು ಆರಂಭಿಸಿದ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ, 'ನಮ್ಮನ್ನು ಈಗಲೂ ಕತ್ತಲಿನಲ್ಲಿ ಇಡಲಾಗಿದೆ,' ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಮಮತಾ ಬ್ಯಾನರ್ಜಿ ಸೇರಿ ಇನ್ನುಳಿದ ಹೆಚ್ಚಿನ ನಾಯಕರೆಲ್ಲಾ ಸರಕಾರದ ಜೊತೆಗಿರುವುದಾಗಿ ಭರವಸೆ ನೀಡಿದರು.
ಗೃಹ ಸಚಿವ ರಾಜನಾಥ್‌ ಸಿಂಗ್‌ ಹಾಗೂ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಲಡಾಖ್‌ನಲ್ಲಿ ನಡೆದ ಘಟನೆಯ ಬಗ್ಗೆ ವಿರೋಧ ಪಕ್ಷಗಳಿಗೆ ವಿವರಣೆ ನೀಡುವುದರೊಂದಿಗೆ ಈ ವರ್ಚುವಲ್‌ ಸರ್ವಪಕ್ಷ ಸಭೆ ಆರಂಭಗೊಂಡಿತು. ನಂತರ ಪ್ರತಿಪಕ್ಷಗಳ ನಾಯಕರು ಒಬ್ಬೊಬ್ಬರಾಗಿ ತಮ್ಮ ಅಭಿಪ್ರಯಾಗಳನ್ನು ಹೇಳಿದರು
(ಮಾಹಿತಿ ಕೃಪೆ ಈ ಸಂಜೆ)

ರಾಜ್ಯದ ಜನರೇ ಎಚ್ಚರ : ಕರ್ನಾಟಕದ ಮೂಲೆಮೂಲೆಗೂ ಎಂಟ್ರಿ ಕೊಟ್ಟಿದೆ ಕೊರೋನಾ..!

ಬೆಂಗಳೂರು, ಜೂ.19- ರಾಜ್ಯದ ಜನರು ಎಚ್ಚರ ವಹಿಸದಿದ್ದರೆ ಮಹಾಮಾರಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಜನಪ್ರತಿನಿಧಿಗಳನ್ನೂ ಕೊರೊನಾ ತನ್ನ ಕರಾಳ ಕಬಂಧ ಬಾಹುವಿನಲ್ಲಿ ಹಿಡಿದಿಟ್ಟುಕೊಳ್ಳುತ್ತಿದೆ.
ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ರಾಜ್ಯದ ಜನ ಎಚ್ಚರ ವಹಿಸಬೇಕಿದೆ. ಕಿಲ್ಲರ್ ಕೊರೊನಾದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಲಾಕ್‍ಡೌನ್ ತೆರವಾಗಿದೆ.

ನಮಗೇನೂ ಆಗುವುದಿಲ್ಲ ಎಂದು ಉಡಾಫೆ ಧೋರಣೆ ತಾಳಿದರೆ ಕೊರೊನಾ ತಗುಲಿ ಯಾತನೆ ಅನುಭವಿಸುವ ದಿನಗಳು ದೂರವಿಲ್ಲ. ಅಂತಹ ಸನ್ನಿವೇಶಗಳು ರಾಜ್ಯದಲ್ಲಿ ಸೃಷ್ಟಿಯಾಗುತ್ತಿವೆ.
ಪ್ರತಿದಿನ 5, 10, 20, 30 ಸೋಂಕಿತರು ಕಾಣಿಸಿಕೊಳ್ಳುತ್ತಿದ್ದ ಪ್ರಮಾಣ ಈಗ 300 ರಿಂದ 500ಕ್ಕೆ ಏರಿಕೆಯಾಗುತ್ತಿದೆ. ಮಾಸ್ಕ್, ಸ್ಯಾನಿಟೈಜರ್ ಎಲ್ಲೆಂದರಲ್ಲಿ ದೊರೆಯುತ್ತಿತ್ತು. ಈಗ ಅದರ ಪ್ರಮಾಣವೂ ಕೂಡ ಕ್ಷೀಣಿಸಿದಂತೆ ಕಂಡುಬರುತ್ತಿದೆ.
ಆಸ್ಪತ್ರೆಗಳಲ್ಲಿ ಐಸೊಲೇಷನ್ ಸಂಖ್ಯೆ ಕಡಿಮೆ ಇತ್ತು. ಜನರಲ್ಲಿ ಸೋಂಕಿನ ಬಗ್ಗೆ ಭಯ ಇತ್ತು. ಈಗ ಜನರಲ್ಲಿ ಸೋಂಕಿನ ಬಗ್ಗೆ ಭಯ ಇಲ್ಲ. ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ, ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ.
ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಹಾಗಾಗಿ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಜತೆಜತೆಗೆ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ವಿಶೇಷವಾಗಿ ಮಕ್ಕಳು, ವೃದ್ಧರು, ರೋಗಿಗಳು ಸೋಂಕಿನಿಂದ ಬಲಿಯಾಗುತ್ತಿದ್ದಾರೆ. ಹಾಗಾಗಿ ಈ ರೋಗವನ್ನು ನಿಯಂತ್ರಿಸುವುದೊಂದೇ ಮಾರ್ಗವಾಗಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು.
ಮೊದಮೊದಲು ಸರ್ಕಾರ ಉಚಿತವಾಗಿ ಕ್ವಾರಂಟೈನ್ ಮಾಡುತ್ತಿತ್ತು. ಪ್ರಾಥಮಿಕ, ದ್ವಿತೀಯ ಸಂಪರ್ಕವನ್ನು ಕೂಡ ಪತ್ತೆಹಚ್ಚಿ ಶಂಕಿತರನ್ನು ಕ್ವಾರಂಟೈನ್ ಮಾಡಿ ಸೋಂಕಿತರನ್ನು ಆಸ್ಪತ್ರೆಗೆ ಕಳುಹಿಸುವ ಕೆಲಸ ಮಾಡುತ್ತಿತ್ತು. ಈಗ ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚುವ ಗೋಜಿಗೆ ಹೋಗುತ್ತಿಲ್ಲ. ಸೋಂಕಿತರನ್ನು ಮಾತ್ರ ಚಿಕಿತ್ಸೆಗೆ ದಾಖಲು ಮಾಡಲಾಗುತ್ತಿದೆ.
ಇತ್ತ ಆಸ್ಪತ್ರೆಗಳಲ್ಲಿ ಸೋಂಕಿತರ ಪ್ರಮಾಣ ಏರಿಕೆಯಾಗಿ ಐಸೊಲೇಷನ್ ಘಟಕಗಳು, ಕ್ವಾರಂಟೈನ್ ಕೇಂದ್ರಗಳು ಕೂಡ ಭರ್ತಿಯಾಗಿವೆ. ಉಚಿತವಾಗಿ ಕ್ವಾರಂಟೈನ್ ಕೇಂದ್ರಗಳನ್ನು ಸರ್ಕಾರ ನಿರ್ವಹಿಸುತ್ತಿತ್ತು. ಮತ್ತೆ ಕೆಲವೆಡೆ ಕ್ವಾರಂಟೈನ್ ಕೇಂದ್ರದ ವೆಚ್ಚವನ್ನು ಶಂಕಿತರೇ ಭರಿಸಬೇಕಾಗಿದೆ.
ಮಹಾನಗರಗಳಲ್ಲಿ ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ವೈದ್ಯರವರೆಗೆ ಕೊರೊನಾ ಆವರಿಸಿದೆ. ಪೊಲೀಸರು, ನರ್ಸ್, ಟ್ಯಾಕ್ಸಿ ಚಾಲಕರು, ಪತ್ರಕರ್ತರು, ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರು ಹೀಗೆ ಬಹುತೇಕರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.
ಮಹಾನಗರಗಳಲ್ಲಿ ಕಂಟೈನ್ಮೆಂಟ್ ಝೋನ್‍ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪೊಲೀಸ್ ಠಾಣೆ, ಸರ್ಕಾರಿ ಕಚೇರಿಗಳು, ತೆರಿಗೆ ಮತ್ತು ವಾಣಿಜ್ಯ ಇಲಾಖೆ ಕಚೇರಿ, ಇವಿಷ್ಟೇ ಅಲ್ಲ, ಶಕ್ತಿಕೇಂದ್ರಕ್ಕೆ ಕೊರೊನಾ ವಕ್ಕರಿಸಿ ಸೀಲ್‍ಡೌನ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
ಹೀಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕೊರೊನಾ ಶಂಕಿತರು ಪತ್ತೆಯಾಗುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸರ್ಕಾರಿ ಆಸ್ಪತ್ರೆಗಳ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಕೊರೊನಾ ಚಿಕಿತ್ಸೆ ಪ್ರಾರಂಭವಾಗಬೇಕಿದೆ.
ಇನ್ನು ಮುಂದೆ ಚಿಕಿತ್ಸಾ ವೆಚ್ಚವನ್ನು ಜನರೇ ಭರಿಸಬೇಕಾಗಬಹುದು. ನಮ್ಮ ಮನೆಗಳೇ ನಮಗೆ ಕ್ವಾರಂಟೈನ್ ಕೇಂದ್ರಗಳಾಗಬಹುದು. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.
ಆರೋಗ್ಯ ಇಲಾಖೆ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಪಾಲಿಸಬೇಕು. ಮಾಸ್ಕ್, ಸ್ಯಾನಿಟೈಜರ್‍ಗಳನ್ನು ತಪ್ಪದೆ ಬಳಸಬೇಕು. ಇಲ್ಲವಾದರೆ ಮಹಾಮಾರಿ ಕೊರೊನಾಕ್ಕೆ ಬಲಿಯಾಗಬೇಕಾಗುತ್ತದೆ ಎಚ್ಚರ..!
(ಮಾಹಿತಿ


ಈ ಸಂಜೆ
ಕೃಪೆ )

ಮೇಲ್ಮನೆಯ 7 ಅಭ್ಯರ್ಥಿಗಳ ಅವಿರೋಧ ಆಯ್ಕೆ



ಬೆಂಗಳೂರು, ಜೂ.19-ರಾಜ್ಯ ವಿಧಾನಸಭೆ ಯಿಂದ ವಿಧಾನಪರಿಷತ್‍ನ ಏಳು ಸದಸ್ಯ ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಸಿದ್ದ 9 ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಇಂದು ನಡೆದಿದ್ದು, ಇಬ್ಬರ ನಾಮಪತ್ರಗಳು ತಿರಸ್ಕøತಗೊಂಡಿವೆ. ಏಳು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ.
ನಿನ್ನೆ ಉಮೇದುವಾರಿಕೆ ಸಲ್ಲಿಸಿದ್ದ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳಾದ ಮಾಜಿ ಸಚಿವರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ, ಕೆ.ಪ್ರತಾಪ್‍ಸಿಂಹ ನಾಯಕ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಾಜಿರ್ ಅಹಮ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದ ರಾಜು ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.
ಮೂರು ಪಕ್ಷಗಳ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.
ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ನಿನ್ನೆ ಸೂಚಕರಾಗಿ ಯಾವುದೇ ಶಾಸಕರು ಸಹಿ ಮಾಡದಿದ್ದರೂ ಪಕ್ಷೇತರ ಅಭ್ಯರ್ಥಿ ಎ.ಯಡವನಹಳ್ಳಿ ಪಿ.ಸಿ.ಕೃಷ್ಣಗೌಡ ಹಾಗೂ ಮಂಡಿಕಲ್ ನಾಗರಾಜ ಅವರು ನಾಮಪತ್ರ ಸಲ್ಲಿಸಿದ್ದರು. ರಾಜ್ಯಸಭೆ ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಪರಿಶೀಲನೆ ನಡೆಸಿದರು.
ಸೂಚಕರ ಸಹಿ ಇಲ್ಲದ ಇವರಿಬ್ಬರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರಗಳು ಕ್ರಬದ್ಧವಾಗಿವೆ ಎಂದು ಪ್ರಕಟಿಸಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಜೂ.22 ಕಡೆಯ ದಿನವಾಗಿದ್ದು, ಅಂದು ಸಂಜೆ ವೇಳೆಗೆ ಅವಿರೋಧ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಚುನಾವಣಾ ಅಧಿಕಾರಿ ಪ್ರಕಟಿಸಲಿದ್ದಾರೆ.


(ಮಾಹಿತಿ

ಈ ಸಂಜೆ

ಕೃಪೆ )

ಚೀನಾ ಗಡಿಯಲ್ಲಿ ಹಿಮ ಬಂಡೆಯಂತೆ ನಿಂತ ಕನ್ನಡಿಗ ಯೋಧ

ಬೆಳಗಾವಿ: ಭಾರತದ ಗಡಿ ಭಾಗದಲ್ಲಿ ಕಾಲು ಕೆದರಿ ಜಗಳ ತೆಗೆಯುತ್ತಿರುವ ಚೀನಾ ಸೈನಿಕರಿಗೆ ತೊಡೆ ತಟ್ಟಿ, ದೇಹದ ಕಣ ಕಣವನ್ನೇ ಮಂಜುಗಡ್ಡೆಯಾಗಿಸುವ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಬೆಳಗಾವಿ ಜಿಲ್ಲೆಯ ಯೋಧನೊಬ್ಬ ಭಾರತದ ರಕ್ಷಣೆಗಾಗಿ ಕಳೆದ ನಾಲ್ಕು ತಿಂಗಳಿಂದ ಸೇವೆ ಸಲ್ಲಿಸುತ್ತಿದ್ದಾನೆ. ಒಂದೆಡೆ ಚೀನಾ ಉಪಟಳವಾದರೆ, ಇನ್ನೊಂದೆಡೆ ಜಗಳಗಂಟ ಪಾಕಿಸ್ತಾನವನ್ನು ಹಿಮ್ಮೆಟ್ಟಿಸುವಲ್ಲಿ ಯೋಧ ನಿರತನಾಗಿದ್ದಾನೆ.
ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಯೋಧ ಅರುಣ ಮಿಸಾಳೆ ಕಳೆದ ಮೂರುವರೆ ತಿಂಗಳಿಂದ ಸಿಯಾಚಿನ್‌ ಗ್ಲೆಸಿಯರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಇಡೀ ದೇಹವನ್ನೇ ಹೆಪ್ಪುಗಟ್ಟಿಸುವ ಮೈನಸ್‌ 40 ಡಿಗ್ರಿ ತಾಪಮಾನದಲ್ಲಿ ಕಣ್ಣಿಗೆ ಎಣ್ಣೆ ಹಾಕಿಕೊಂಡು ದೇಶ ಸೇವೆ ಮಾಡುತ್ತಿದ್ದಾನೆ. ಸದ್ಯ ಚೀನಾದಿಂದ ಸ್ವಲ್ಪ ದೂರದಲ್ಲಿಯೇ ಇರುವ ಯೋಧ ಅರುಣ ಅಲ್ಲಿಯ ಸದ್ಯದ ಸ್ಥಿತಿಗತಿ ಕುರಿತು “ಉದಯವಾಣಿ’ಯೊಂದಿಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾನೆ.
ಜಗತ್ತಿನ ಅತಿ ಎತ್ತರದ ಯುದ್ಧಭೂಮಿ:
ಜೀವನದಲ್ಲಿ ಒಮ್ಮೆ ಮಾತ್ರ ಸಿಯಾಚಿನ್‌ ಗ್ಲೆಸಿಯರ್‌ನಲ್ಲಿ ಕರ್ತವ್ಯ ನಿರ್ವಹಿಸುವ ಅವಕಾಶ ಯೋಧನಿಗೆ ಸಿಗುತ್ತದೆ. ಇದೇ ಅವಕಾಶವನ್ನೇ ಬಳಸಿಕೊಂಡು ಮಾರ್ಚ್‌ನಲ್ಲಿ ಮೈನಸ್‌ 30-35ರ ತಾಪಮಾನದಲ್ಲಿ ಪರ್ವತವನ್ನೇರಿದ ಯೋಧ ಅರುಣ ಗಡಿ ಕಾಯುತ್ತ ನಿಂತಿದ್ದಾನೆ. ಜಗತ್ತಿನ ಅತಿ ಎತ್ತರದ ಯುದ್ಧಭೂಮಿ, ಅಪಾಯಕಾರಿ ಹವಾಮಾನದಲ್ಲಿ ಭಾರತೀಯ ಸೇನೆ ಇಲ್ಲಿ ನಮ್ಮ ನೆಲವನ್ನು ರಕ್ಷಣೆ ಮಾಡುತ್ತಿದ್ದು, ಇದರಲ್ಲಿ ನಮ್ಮ ಕನ್ನಡಿಗ ಯೋಧ ಇರುವುದು ಹೆಮ್ಮೆಯ ವಿಷಯವಾಗಿದೆ.

ಶತ್ರುಗಳ ಗುಂಡಿಗಿಂತ ಚಳಿಯೇ ಉಗ್ರ:
ಅಪಾಯಕಾರಿ ಹವಾಮಾನದಲ್ಲಿ ಗಡಿ ಕಾಯುವುದು ಸವಾಲಿನ ಕೆಲಸವಾಗಿದೆ. ಶತ್ರುಗಳ ಗುಂಡಿಗಿಂತ ಚಳಿಯೇ ಉಗ್ರನಂತೆ ನರ್ತಿಸುತ್ತದೆ. ಈ ಹಿಮ ಪ್ರವಾಹಕ್ಕೆ ಅನೇಕ ಯೋಧರು ಪ್ರಾಣ ತೆತ್ತಿದ್ದಾರೆ. ಇಲ್ಲಿ ಕರ್ತವ್ಯ ನಿರ್ವಹಿಸಲು ಕೇವಲ ಮೂರು ತಿಂಗಳು ಮಾತ್ರ ಅವಕಾಶ ಇದೆ. ಆದರೆ ಸದ್ಯ ಲಾಕ್‌ಡೌನ್‌ದಿಂದಾಗಿ ಕೆಲವು ಯೋಧರು ಕರ್ತವ್ಯಕ್ಕೆ ಹಾಜರಾಗದಿರುವುದು, ಜತೆಗೆ
ಭಾರತ-ಚೀನಾ ಸಂಘರ್ಷ ಹಿನ್ನೆಲೆಯಲ್ಲಿ ಮತ್ತೆ ಒಂದು ತಿಂಗಳು ಯೋಧ ಅರುಣ ಮಿಸಾಳೆಯ ಸೇವೆ ಹೆಚ್ಚುವರಿಯಾಗಿದೆ.
ಮಾರ್ಚ್‌ ತಿಂಗಳಲ್ಲಿ ಯೋಧ ಅರುಣ ಕಾಲ್ನಡಿಗೆ ಮೂಲಕ ಹಿಮ ಪರ್ವತವನ್ನೇರುವಾಗ ಸುಮಾರು ಮೈನಸ್‌ 50-55 ಡಿಗ್ರಿವರೆಗೂ ಹವಾಮಾನ ಇತ್ತು. ಸದ್ಯ ಹವಾಮಾನ ತುಸು ಇಳಿಕೆಯಾಗಿದ್ದು, ಮಧ್ಯ ರಾತ್ರಿಯಲ್ಲಿ ಮೈನಸ್‌ 25ರವರೆಗೂ ಇರುತ್ತದೆ. ಇಂಥದರಲ್ಲಿ ಹಿಮವನ್ನೇ ಕಾಯಿಸಿ ನೀರು ಕುಡಿಯಬೇಕಾಗುತ್ತದೆ. ನಿದ್ದೆಯಂತೂ ಅಷ್ಟಕ್ಕಷ್ಟೇ ಆಗಿದ್ದು, ನಿದ್ದೆಯಲ್ಲಿದ್ದಾಗ ಆಮ್ಲಜನಕ ಪಡೆದುಕೊಳ್ಳಲು 2-3 ಬಾರಿ ಎದ್ದು ನೀರು ಕುಡಿಯಬೇಕಾಗುತ್ತದೆ ಎನ್ನುತ್ತಾರೆ ಯೋಧ ಅರುಣ ಮಿಸಾಳೆ.

ಸಿಯಾಚಿನ್‌ದಲ್ಲಿ ಸ್ನಾನ ಮಾಡದ ಯೋಧ:
ನಾಲ್ಕು ತಿಂಗಳಲ್ಲಿ ಒಮ್ಮೆಯೂ ಸ್ನಾನ ಮಾಡಿಲ್ಲ. ಬಕೆಟ್‌ನಲ್ಲಿ ನೀರು ಕಾಯಿಸಿ ತೆಗೆದುಕೊಳ್ಳುವಷ್ಟರಲ್ಲಿ ಹಿಮ ಆಗಿರುತ್ತದೆ. ನಾವು ಧರಿಸುವ ಸಮವಸ್ತ್ರಗಳೇ ನಮಗೆ ಸಂಜೀವಿನಿ ಇದ್ದಂತೆ. ಸಂಪೂರ್ಣ ದೇಹವನ್ನು ಮುಚ್ಚುವ ಈ ಸಮವಸ್ತ್ರದಿಂದ ದೇಹ ಸ್ವಲ್ಪ ಪ್ರಮಾಣದಲ್ಲಿ ಚಳಿ ತಡೆದುಕೊಳ್ಳುತ್ತದೆ. ಅತಿ ಹೆಚ್ಚು ಹಿಮಪಾತ ಆಗುವಾಗ ಹಿಮ ತೆಗೆದು ಅಲ್ಲಿ ದಿನ ಕಳೆಯುವುದೇ ಒಂದು ದೊಡ್ಡ ಸವಾಲಾಗಿದೆ. ಒಂದೆಡೆ ಹಿಮಪಾತ, ಮತ್ತೂಂದೆಡೆ ಶತ್ರುಗಳಿಂದ ರಕ್ಷಿಸಿಕೊಳ್ಳುವುದು ಎಂದರೆ ಹೋದ ಜೀವ ಮತ್ತೆ ವಾಪಸ್‌ ಪಡೆದುಕೊಂಡಂತೆ ಎಂಬ ಮಾತನ್ನು ಅರುಣ ಹೇಳಿಕೊಂಡರು.

ನಾಲ್ಕು ದಿನಗಳ ಹಿಂದೆ ಭಾರತ-ಚೀನಾ ಮಧ್ಯೆ ನಡೆದ ಗುಂಡಿನ ಕಾಳಗದಿಂದ ಸುಮಾರು 8-10 ಕಿ.ಮೀ. ದೂರದಲ್ಲಿರುವ ಯೋಧ ಅರುಣ ಅವರ ತಂಡವೂ ಅಲರ್ಟ್‌ ಆಗಿದ್ದು, ಪ್ರತಿ ಕ್ಷಣವನ್ನು ಶತ್ರುಗಳ ಹೆಜ್ಜೆಗಳತ್ತ ದೃಷ್ಟಿ ಹರಿಸಿದೆ. ಯಾವುದೇ ಕ್ಷಣದಲ್ಲಿಯೂ ಚೀನಾ ಸೈನಿಕರು ಭಾರತದ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ದೇಶದ ಗಡಿ ಕಾಯುವಲ್ಲಿ ಇಂಥ ಅನೇಕ ತಂಡಗಳು ಸಜ್ಜಾಗಿವೆ. ಮಾಜಿ ಸೈನಿಕ, ತಂದೆ ಲಕ್ಷ್ಮಣ ಹಾಗೂ ತಾಯಿ ಜೀಜಾಬಾಯಿ ಅವರ ಕಿರಿಯ ಪುತ್ರನಾಗಿರುವ ಅರುಣ 2012ರಲ್ಲಿ ಮರಾಠಾ ಲಘು ಪದಾತಿ ದಳಕ್ಕೆ ಸೇರಿದ್ದರು. ಪತ್ನಿ ಸವಿತಾ ಕಳೆದ ವರ್ಷವೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬರುವ
ಜೂ.20ಕ್ಕೆ ಮೊದಲ ವರ್ಷದ ಜನ್ಮ ದಿನಾಚರಣೆ ಇದೆ. ಹಿರಿಯ ಸಹೋದರ ಮಂಜುನಾಥ ಕೂಡ ಸಿಐಎಸ್‌ಎಫ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ.

5-6 ಕೆ.ಜಿ. ತೂಕ ಇಳಿಕೆ
ಶತ್ರು ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನದ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ನಿರತನಾಗಿರುವ ಬೆಳಗಾವಿಯ ಯೋಧ ಅರುಣ ಮಿಸಾಳೆ ಸಿಯಾಚಿನ್‌ ಗ್ಲೆಸಿಯರ್‌ಗೆ ಹೋಗುವ ಮುನ್ನ ಅನೇಕ ತರಬೇತಿ ಪಡೆದುಕೊಂಡಿದ್ದಾನೆ.
ವೈದ್ಯಕೀಯ ವರದಿ ಸರಿಯಾಗಿ ಇದ್ದರೆ ಮಾತ್ರ ಸಿಯಾಚಿನ್‌ಗೆ ಕಳುಹಿಸಲಾಗುತ್ತದೆ. ಅರುಣ ಆಯ್ಕೆಯಾದ ಬಳಿಕ ಈ ಮೂರುವರೆ
ತಿಂಗಳಲ್ಲಿ ಈತನ ದೇಹ ತೂಕ 5ರಿಂದ 6 ಕೆ.ಜಿ ಇಳಿಕೆ ಆಗಿದೆ. ಇಲ್ಲಿ ಆಹಾರ ತಯಾರಿಸಿ ಉಣ್ಣುವುದು ಎಂದರೆ ಆಗದ ಮಾತು.
ಕೇವಲ ಒಣ ಹಣ್ಣು(ಡ್ರೈ ಫ್ರೂಟ್ಸ್‌)ಗಳನ್ನೇ ತಿಂದು ಬದುಕುತ್ತಿರುವ ಯೋಧರಿಗೆ ಚಳಿ ತಡೆದುಕೊಳ್ಳುವುದೇ ದೊಡ್ಡ ಸವಾಲಾಗಿದೆ.
ಸದ್ಯ ಚೀನಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ಇನ್ನೂ ಕೆಲವು ದಿನಗಳ ಕಾಲ ಅರುಣ ಅಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ.

– ಭೈರೋಬಾ ಕಾಂಬಳೆ
(ಮಾಹಿತಿ
ಉದಯವಾಣಿ ಕೃಪೆ ) 

ಜಿಂದಾಲ್ ನಂಜು ಮುಂದುವರೆದರೆ ಕಂಪನಿ ಸಂಪೂರ್ಣ ಬಂದ್; ಆನಂದ್ ಸಿಂಗ್

ಬಳ್ಳಾರಿ, ಜೂನ್ 19: ಬಳ್ಳಾರಿ ಜಿಲ್ಲೆಯ ಜಿಂದಾಲ್ ನಂಜು ಇದೇ‌ ರೀತಿ ಮುಂದುವರೆದರೆ ಇಡೀ ಕಂಪನಿಯನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಇಲಾಖೆ ಖಾತೆ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ‌
ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ನಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಜಿಂದಾಲ್ ಕಂಪನಿಯನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಚೆರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುತ್ತಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆ ಸೊಮವಾರ ತುರ್ತು ಸಭೆ ಕರೆಯಲಾಗಿದೆ. ಜಿಂದಾಲ್ ಮುಖ್ಯಸ್ಥ ವಿನೋದ್ ನಾವೆಲ್ ಅವರೂ ಸಭೆಗೆ ಆಗಮಿಸಲಿದ್ದಾರೆ ಎಂದರು. ದೇಶ ಲಾಕ್ ಡೌನ್ ಮಾಡಿದಾಗಲೂ ಜಿಂದಾಲ್ ಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೆವು. ಹೀಗಾಗಿ ಜನ ನಮ್ಮ ಮೇಲೆ ಅನುಮಾನ ವ್ಯಕ್ತಪಡಿಸುತ್ತಾರೆ. ಆದರೆ ಸರ್ಕಾರ ಅಗತ್ಯ ಬಿದ್ದರೆ ಜಿಂದಾಲ್ ಸಂಪೂರ್ಣ ಬಂದ್ ಮಾಡಲು ಸಿದ್ಧವಾಗಿದೆ ಎಂದಿದ್ದಾರೆ.
(ಮಾಹಿತಿOneindiaಕೃಪೆ )  

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬಾಗಲಕೋಟೆ: ಸಾಲದ ಬಾಧೆಯಿಂದ ಬಾದಾಮಿ ತಾಲ್ಲೂಕಿನ ತಳಕವಾಡದ ರೈತ ಶಂಕರಪ್ಪ ಬಾದಾಮಿ (28) ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರಪ್ಪ ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 1 ಲಕ್ಷ, ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ₹ 3 ಲಕ್ಷ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆ ಹಾನಿಗೀಡಾಗಿತ್ತು. ಆಗಿನಿಂದ ಶಂಕರಪ್ಪ ಖಿನ್ನತೆಗೆ ಒಳಗಾಗಿದ್ದರು. ಸಾಲ ತೀರಿಸುವುದು ಹೇಗೆಂದು ನೊಂದಿದ್ದರು ಎಂದು ತಿಳಿದುಬಂದಿದೆ.
ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Thursday, June 18, 2020

ಎಚ್‌ಡಿಕೆ ನೋಡಬೇಕಾದ ಸುದ್ದಿ ಇದು: ಜಿಲ್ಲಾಧಿಕಾರಿ ಎದುರು ಬಿಕ್ಕಿಬಿಕ್ಕಿ ಅತ್ತ ಅಂಗವಿಕಲೆ!

ಬೆಳಗಾವಿ: ರಾಮದುರ್ಗ ತಾಲೂಕಿನ ಅಂಗವಿಕಲ ಯುವತಿಯೊಬ್ಬಳು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರ ಬಳಿ ಕಣ್ಣೀರಿಟ್ಟ ಘಟನೆ ಗುರುವಾರ ನಡೆದಿದೆ.
ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜನತಾ ದರ್ಶನಕ್ಕೆ ಬಂದಿದ್ದ ಅಂಗವಿಕಲ ಯುವತಿ ಸಲೀಮಾ ಅವರಿಗೆ ಅನುಕಂಪ ತೋರಿ ರಾಮದುರ್ಗ ತಹಸೀಲ್ದಾರ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸಲಾಗಿತ್ತು. ಈಗ ದಿಢೀರನೆ ಕೆಲಸದಿಂದ ತೆಗೆದಿದ್ದಾರೆ. ಇದರಿಂದ ಮನನೊಂದ ಆ ಯುವತಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಎದುರು 'ನನಗೆ ನ್ಯಾಯ ಕೊಡಿಸಿ' ಎಂದು ಮಕ್ಕಳಂತೆ ಗಳಗಳನೆ ಅತ್ತರು.
'ಕಳೆದ ಅಕ್ಟೋಬರ್‌ನಿಂದ ಪ್ರಸಕ್ತ ವರ್ಷದ ಮಾರ್ಚ್‌ವರೆಗೂ ಕೆಲಸ ಮಾಡಿರುವೆ.
ತಿಂಗಳಿಗೆ 5 ಸಾವಿರ ರೂ. ಸಂಬಳ ಎಂದು ಹೇಳಿ 5 ತಿಂಗಳು ಕೆಲಸ ಮಾಡಿಸಿಕೊಂಡು ಕೇವಲ 10 ಸಾವಿರ ರೂ. ನೀಡಿದ್ದಾರೆ. ಈಗ ಮತ್ತೆ ಕೆಲಸಕ್ಕೆ ಹೋದರೆ ಬರುವುದು ಬೇಡ ಎನ್ನುತ್ತಿದ್ದಾರೆ' ಎಂದು ಅಳಲು ತೋಡಿಕೊಂಡಳು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವೆ ಎಂದು ತಿಳಿಸಿದರು. ಅಷ್ಟಕ್ಕೆ ಸುಮ್ಮನಾಗದ ಯುವತಿ, ತಕ್ಷಣವೇ ಬಾಕಿ ಸಂಬಳ ಹಾಗೂ ಕೆಲಸ ನೀಡುವಂತೆ ಹಠ ಹಿಡಿದಳು. ಆದರೆ, ಜಿಲ್ಲಾಧಿಕಾರಿ ಅವರು ಭರವಸೆ ನೀಡಿ ಹೊರಟು ಹೋದರು.
(ಮಾಹಿತಿ ಕೃಪೆ ವಿಜಯವಾಣಿ)

ಮಗುವಿನ ಜನ್ಮ ನೀಡಿದ ಕೊರೊನಾ ವೈರಸ್ ಸೋಂಕಿತೆ

ಕೊರೊನಾ ಸೋಂಕು ಹೊಂದಿದ್ದ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.

22 ವರ್ಷದ ಗರ್ಭಿಣಿಗೆ ಕೊರೊನಾ ವೈರಸ್ ತಗುಲಿತ್ತು. ಜೂನ್ 17 ರಂದು ಉಡುಪಿಯ ಡಾ.ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.

ಕಾರ್ಕಳ ಮೂಲದ ಮಹಿಳೆ ಗೆ ತುರ್ತು ಸಿಸೇರಿಯನ್ ಮಾಡಲಾಗಿದ್ದು, ತಾಯಿ, ಮಗು ಆರೋಗ್ಯವಾಗಿದೆ.

ಪ್ರಸೂತಿ ತೊಂದರೆ ಕಾರಣಗಳಿಂದ ಸಿಸೇರಿಯನ್ ಮಾಡಬೇಕಾಯಿತು. ತುರ್ತು ಶಸ್ತ್ರಚಿಕಿತ್ಸೆಗೆ ಮಹಿಳೆಗೆ ಅಗತ್ಯವಾಗಿತ್ತು ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.