WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, December 9, 2021

ಕಂಪ್ಲಿ'ಯನ್ನು ವಿಜಯನಗರ ಜಿಲ್ಲೆ ಸೇರ್ಪಡೆ ವಿಚಾರಣೆ ಫೆಬ್ರವರಿ 15 ಕ್ಕೆ

 ಬೆಂಗಳೂರು, 9 ಡಿಸೆಂಬರ್(ಹಿ.ಸ):

ಬಳ್ಳಾರಿ ಜಿಲ್ಲೆಯಲ್ಲಿ ಇರುವ `ಕಂಪ್ಲಿ' ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡಿಸಲು ಆಗ್ರಹಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಾಗಿಸಲಾಗಿತ್ತು.

ಪಿಐಎಲ್ ನ ಪ್ರಕರಣವು ಮುಖ್ಯ ನ್ಯಾಯಾಧೀಶರಾದ ರಿತುರಾಜು ಅವಸ್ಥಿ ಮತ್ತು ಸಚಿನ್ ಶಂಕರ್ ಮಗದುಮ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.ಈ ಪ್ರಕರಣದ ವಿಚಾರಣೆಯನ್ನ ನ್ಯಾಯಾಧೀಶರ ಪೀಠವು ಫೆಬ್ರವರಿ 15 ಕ್ಕೆ ಮುಂದೂಡಿದೆ.

(ಮಾಹಿತಿ ಕೃಪೆ Hindusthan Samachar)

Arogya Karnataka Scheme : ಚಿಕಿತ್ಸೆಗೆ ಆರೋಗ್ಯ ಕಾರ್ಡ್ ಬಿಟ್ಟು ಮತ್ತೇನು ಕೇಳುವಂತಿಲ್ಲ


  ಬೆಂಗಳೂರು (ಡಿ.09): ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ (Arogya karnataka) ಯೋಜನೆಯಡಿ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ (Hospital) ಚಿಕಿತ್ಸೆ (Treatment) ಪಡೆಯಲು ಆಗಮಿಸುವ ಫಲಾನುಭವಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ (Ayushman Arogya Card) ಬಿಟ್ಟು ಇತರೆ ಯಾವುದೇ ದಾಖಲೆ ಕೇಳಬಾರದೆಂದು ಆರೋಗ್ಯ ಇಲಾಖೆ (Health Department) ಎಚ್ಚರಿಕೆ ನೀಡಿದೆ.

ಬಿಪಿಎಲ್ (BPL) ಮತ್ತು ಎಪಿಎಲ್(APL) ಕುಟುಂಬದ ಸದಸ್ಯರಿಗೆ ಶೀಘ್ರ ಹಾಗೂ ಶುಲ್ಕ ರಹಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಯೋಜನೆ ಪ್ರಾರಂಭಿಸಲಾಗಿದೆ. ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಅವಶ್ಯಕತೆ ಆಧರಿಸಿ ಚಿಕಿತ್ಸೆ ಒದಗಿಸಲಾಗುತ್ತದೆ. ರಾಜ್ಯದಲ್ಲಿ 1.5 ಕೋಟಿ ಆರೋಗ್ಯ ಕಾರ್ಡ್ ವಿತರಿಸಲಾಗಿದೆ.

ಫಲಾನು ಭವಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಬಂದಾಗ ಹಾಗೂ ಒಳರೋಗಿಯಾಗಿ ದಾಖಲಾದಾಗ ಆರೋಗ್ಯ ಕಾರ್ಡ್ ತೋರಿಸಿದರೂ ಪಡಿತರ ಚೀಟಿ (Ration Card), ಇತರೆ ಕೆಲ ಪೂರಕ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗುತ್ತಿದೆ. ಆಸ್ಪತ್ರೆಗಳ ಆರೋಗ್ಯ ಮಿತ್ರ ಸಹಾಯಕರು ಚಿಕಿತ್ಸೆಗೆ ಅವಕಾಶ ನೀಡದಿರುವ ಬಗ್ಗೆ ಇಲಾಖೆಗೆ ದೂರುಗಳು (Complaints) ಬಂದಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಡ್ ಇರುವವರು ಬೇರೆ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸುವ ಅಗತ್ಯವಿಲ್ಲ. ಪೂರಕ ದಾಖಲೆಗಳಗೆ ಒತ್ತಾಯಿಸುವುದನ್ನು ನಿಷೇಧಿಸಲಾಗಿದೆ.

ಆರೋಗ್ಯ ಕಾರ್ಡ್ ಹೊಂದಿರುವವರಿಗೆ ಚಿಕಿತ್ಸೆ ನೀಡದಿದ್ದಲ್ಲಿ ನಿಯಮಾನುಸಾರ ದುರ್ನಡತೆಯೆಂದು ಪರಿಗಣಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ (Health Department) ಆಯುಕ್ತ ಡಿ.ರಂದೀಪ್ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕಿ ಎನ್.ಟಿ.ಆಬ್ರು ಜಂಟಿ ಸುತ್ತೋಲೆ ಹೊರಡಿಸಿದ್ದಾರೆ.

ನಿಮ್ಮ ಆರೋಗ್ಯ ಐಡಿ ಕಾರ್ಡ್ ಹೀಗೆ ಪಡೆಯಿರಿ:

ದೇಶದ ಪ್ರತಿ ಪ್ರಜೆಗೂ ಅವರ ಆರೋಗ್ಯದ(health) ಸಂಪೂರ್ಣ ಮಾಹಿತಿ ಒಳಗೊಂಡ ಡಿಜಿಟಲ್‌ ಕಾರ್ಡ್‌(Digital Card) ವಿತರಿಸುವ 'ಪ್ರಧಾನಿ ಮಂತ್ರಿ ಡಿಜಿಟಲ್‌ ಹೆಲ್ತ್‌ ಮಿಷನ್‌'(Pradhan Mantri Jan Arogya Yojana) ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ. ಇದರೊಂದಿಗೆ ಪ್ರಾಯೋಗಿಕವಾಗಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದ್ದ ಯೋಜನೆ ಇದೀಗ ದೇಶವ್ಯಾಪಿ ವಿಸ್ತರಣೆಯಾಗಿದೆ. ದೇಶದ ಪ್ರತಿ ಪ್ರಜೆಗೂ ಗುಣಮಟ್ಟದ, ಸುಲಲಿತ, ಸಮಗ್ರ, ಅಗ್ಗದ ಮತ್ತು ಸುರಕ್ಷಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಏನಿದು ಯೋಜನೆ?

ಪ್ರಧಾನಮಂತ್ರಿ ಡಿಜಿಟಲ್‌ ಆರೋಗ್ಯ ಮಿಷನ್‌ ಯೋಜನೆಯಡಿ (ಎನ್‌ಡಿಎಚ್‌ಎಂ) ದೇಶದ ಪ್ರತಿಯೊಬ್ಬರಿಗೂ ಆಧಾರ್‌(Aadhar) ಮತ್ತು ಮೊಬೈಲ್‌ ಸಂಖ್ಯೆ ರೀತಿ ವಿಶೇಷ ಗುರುತಿನ ಸಂಖ್ಯೆ ಮತ್ತು ಕಾರ್ಡ್‌ ವಿತರಿಸಲಾಗುತ್ತದೆ. ಈ ಗುರುತಿನ ಚೀಟಿಯು ವ್ಯಕ್ತಿಯೊಬ್ಬರ ಆರೋಗ್ಯ ಕುರಿತಾದ ಎಲ್ಲಾ ಮಾಹಿತಿಯನ್ನು ಒಳಗೊಂಡಿರಲಿದೆ. ಅಂದರೆ ಕಾರ್ಡ್‌ ವಿತರಿಸಿದ ಬಳಿಕ ಆ ವ್ಯಕ್ತಿ ದೇಶದ ಯಾವುದೇ ವೈದ್ಯರನ್ನು ಭೇಟಿ ಮಾಡಿದ ವಿಷಯ, ಅವರು ಆತನಿಗೆ ನೀಡಿದ ಚಿಕಿತ್ಸೆ, ವೈದ್ಯಕೀಯ ವರದಿಗಳು, ಕಾಯಿಲೆಗಳು ಸೇರಿದಂತೆ ಆತನ ಎಲ್ಲಾ ಆರೋಗ್ಯದ ಮಾಹಿತಿ ಒಳಗೊಂಡಿರುತ್ತದೆ.

ಏನಿದರ ಉಪಯೋಗ?

ಡಿಜಿಟಲ್‌ ಆರೋಗ್ಯ ಕಾರ್ಡಲ್ಲಿ(Digital Health card) ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ದಾಖಲಿಸಲಾಗುತ್ತದೆ. ಹೀಗಾಗಿ ವ್ಯಕ್ತಿಯೊಬ್ಬ ಭವಿಷ್ಯದಲ್ಲಿ ಯಾವುದೇ ವೈದ್ಯರ ಭೇಟಿ ವೇಳೆ ಈ ಕಾರ್ಡ್‌ ತೋರಿಸಿದರೆ ಅವರಿಗೆ ರೋಗಿಯ ಎಲ್ಲಾ ಪೂರ್ವಾಪರ ತಿಳಿಯುತ್ತದೆ. ಇದರಿಂದ ತಮ್ಮ ಹಳೆಯ ಚಿಕಿತ್ಸೆಯ ಮಾಹಿತಿಯ ಕಡತಗಳನ್ನು ರೋಗಿ ಎಲ್ಲೆಡೆ ತೆಗೆದುಕೊಂಡು ಹೋಗಬೇಕಿಲ್ಲ. ರೋಗಿಯ ಈ ಆರೋಗ್ಯ ಗುರುತಿನ ಚೀಟಿಯನ್ನು ನೋಡಿದರೆ, ವೈದ್ಯರು ಆರೋಗ್ಯ ಪರಿಸ್ಥಿತಿಯನ್ನು ತಿಳಿದುಕೊಳ್ಳಬಹುದು. ಜೊತೆಗೆ ಹೆಚ್ಚಿನ ಚಿಕಿತ್ಸೆಯನ್ನು ಮುಂದುವರಿಸಲು ಸಾಧ್ಯವಾಗುತ್ತದೆ. ಈ ಕಾರ್ಡ್‌ ಮೂಲಕ ರೋಗಿಗಳು ಆಯುಷ್ಮಾನ್‌ ಭಾರತ್‌ ಯೋಜನೆಯಂತಹ ಸರ್ಕಾರಿ ಯೋಜನೆಗಳಿಂದ ಪ್ರಯೋಜನಗಳನ್ನು ಪಡೆಯಲೂ ಸಾಧ್ಯವಾಗಲಿದೆ. ಸರ್ಕಾರಕ್ಕೆ ನಿರ್ದಿಷ್ಟಯೋಜನೆ ರೂಪಿಸಲು ಸಾಧ್ಯವಾಗುತ್ತದೆ.

ವೈದ್ಯರಿಗೂ ಸಹಾಯಕ

ಸರ್ಕಾರ ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಡೇಟಾಬೇಸ್‌ ಅನ್ನು ಈ ಕಾರ್ಡ್‌ ಮೂಲಕ ಸಿದ್ಧಪಡಿಸುತ್ತದೆ. ಎಲ್ಲಾ ವಿವರಗಳನ್ನು ಆ ವ್ಯಕ್ತಿಯ ವೈದ್ಯಕೀಯ ದಾಖಲೆಯಲ್ಲಿ ಇರಿಸಲಾಗುವುದು. ಈ ಐಡಿಯ ಸಹಾಯದಿಂದ, ಒಬ್ಬ ವ್ಯಕ್ತಿಯ ಸಂಪೂರ್ಣ ವೈದ್ಯಕೀಯ ದಾಖಲೆಯನ್ನು ನೋಡಬಹುದು. ಇದರಿಂದ ವೈದ್ಯರಿಗೂ ನೆರವಾಗಲಿದೆ. ವ್ಯಕ್ತಿಯ ಹಿಂದಿನ ಆರೋಗ್ಯ ಸ್ಥಿತಿ, ಆತನ ವೈದ್ಯಕೀಯ ಚಿಕಿತ್ಸೆ ಬಗ್ಗೆ ಸುಲಭವಾಗಿ ಎಲ್ಲಾ ಮಾಹಿತಿ ಸಿಗಲಿದೆ. ಈ ಸೌಲಭ್ಯದ ಮೂಲಕ ಹೆಚ್ಚು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.

ಐಡಿ ಪಡೆಯುವುದು ಹೇಗೆ?

ಈ ಆರೋಗ್ಯಕಾರ್ಡ್‌ ಐಡಿಯನ್ನು ವ್ಯಕ್ತಿಯೊಬ್ಬರ ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಸಂಖ್ಯೆಯನ್ನು ಬಳಸಿ ರಚಿಸಲಾಗುತ್ತದೆ. ಇದಕ್ಕಾಗಿ, ಸರ್ಕಾರವು ಆರೋಗ್ಯ ಪ್ರಾಧಿ​ಕಾರವನ್ನು ರಚಿಸಲಿದ್ದು, ಈ ಮೂಲಕ ವ್ಯಕ್ತಿಯ ಎಲ್ಲಾ ದಾಖಲೆಯನ್ನು ಸಂಗ್ರಹಿಸುತ್ತದೆ. ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ನೋಂದಾವಣೆಗೆ ಸಂಪರ್ಕಿಸಬಹುದು. ನಿಮ್ಮ ದಾಖಲೆಗಳನ್ನು https://healthid.ndhm.gov.in/ ನಲ್ಲಿ ನೋಂದಾಯಿಸುವ ಮೂಲಕ, ನಿಮ್ಮ ಆರೋಗ್ಯ ಐಡಿಯನ್ನು ನೀವೂ ರಚಿಸಬಹುದು. ಅಥವಾ ಗೂಗಲ್‌ ಪ್ಲೇಸ್ಟೋರ್‌ನಲ್ಲಿ ಎಬಿಡಿಎಂ ಹೆಲ್ತ್‌ ರೆಕಾರ್ಡ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡುವ ಮೂಲಕ ಆರೋಗ್ಯ ಐಡಿಯನ್ನು ಪಡೆಯಬಹುದು. ಮೂಲ ವಿವರಗಳನ್ನು ಪಡೆಯಲು ಮೊಬೈಲ್‌ ಸಂಖ್ಯೆ ಅಥವಾ ಆಧಾರ್‌ ಸಂಖ್ಯೆ ದೃಢೀಕರಿಸಲು ಮಾತ್ರ ಸಮಯ ಹಿಡಿಯುತ್ತದೆ. ಇದರ ಹೊರತಾಗಿ 10 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಮುಗಿಯಲಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?

- https://healthid.ndhm.gov.in/ ವೆಬ್‌ಸೈಟ್‌ಗೆ ಲಾಗಿನ್‌ ಆಗಿ

(

-ಎನ್‌ಡಿಎಚ್‌ಎಂ ಐಡಿ ಆಯಪ್‌ ತೆರೆಯಿರಿ. ನೋಂದಣಿ ಪುಟ ತೆರೆಯುತ್ತದೆ.

-ರಿಜಿಸ್ಟರ್‌ ಬಟನ್‌ ಮೇಲೆ ಕ್ಲಿಕ್‌ ಮಾಡಿ

-ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನಮೂದಿಸಿ

-ನೀವು ನಮೂದಿಸಿದ ಮೊಬೈಲ್‌ ಸಂಖ್ಯೆಗೆ ಬಂದ ಒಟಿಪಿಯನ್ನು ಟೈಪ್‌ ಮಾಡಿ.

-ಅರ್ಜಿಯ ಅಂತಿಮ ಸಲ್ಲಿಕೆಗೆ 'ಸಬ್ಮಿಟ್‌' ಬಟನ್‌ ಮೇಲೆ ಕ್ಲಿಕ್‌ ಮಾಡಿ.

(ಮಾಹಿತಿ ಕೃಪೆ ಸುವರ್ಣ ನ್ಯೂಸ್)

ಕಾಪ್ಟರ್ ಪತನ: ಘಟನಾ ಸ್ಥಳದಲ್ಲಿ CRPF ಕೋಬ್ರಾ ಪಡೆಯಿಂದ ಶಂಕಿತ ವ್ಯಕ್ತಿ ಅರೆಸ್ಟ್

 

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು ಸಿಆರ್‌ಪಿಎಫ್‌ನ ಕೋಬ್ರಾ ಪಡೆ ಬಂಧಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ನೀಲಗೀರಿ ಅರಣ್ಯದ ಪರ್ವತ ಪ್ರದೇಶಗಳ ವೆಲ್ಲಿಂಗ್‌ಟನ್ ಬಳಿ ಈ ದುರ್ಘಟನೆ ನಡೆದಿದೆ.

ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು ಎಂದು ಹಲವರು ಪ್ರಶ್ನಿಸುತ್ತಿದ್ದು ನೀಲಗೀರಿ ಕಾಡಿನಲ್ಲಿ ಪತನವಾಗಿದ್ದರ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಘಟನೆ ನಡೆದ ಸ್ಥಳ ವೆಲ್ಲಿಂಗ್‌ಟನ್‌ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತುರ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ತೀವ್ರ ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದು ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿರುವುದಾಗಿ ಐಎಎಫ್ ತಿಳಿಸಿತ್ತು.

(ಮಾಹಿತಿ ಕೃಪೆ ಪ್ರಜಾವಾಣಿ)

ಉದ್ಯೋಗ ವಾರ್ತೆಗಳು: ಐಐಎಸ್‌ಸಿಯಲ್ಲಿ ಹುದ್ದೆಗಳು

 

ಐಐಎಸ್‌ಸಿಯಲ್ಲಿ ಹುದ್ದೆಗಳು

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಎಲೆಕ್ಟ್ರಾನಿಕ್‌ ಸಂಪನ್ಮೂಲ ನಿರ್ವಹಣೆ, ಪ್ರಾಜೆಕ್ಟ್‌ ಟ್ರೈನಿ, ಲೈಬ್ರರಿ ಇನ್ಫರ್ಮೇಷನ್‌ ಮ್ಯಾನೇಜ್‌ಮೆಂಟ್ ಟ್ರೈನಿ

ಹುದ್ದೆಗಳ ಸಂಖ್ಯೆ: 14

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ, ಬಿಟೆಕ್‌, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. 

ವಯೋಮಿತಿ: ಗರಿಷ್ಠ 30 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 14, 2021

ಹೆಚ್ಚಿನ ಮಾಹಿತಿಗೆ: https://iisc.ac.in/opportunities/

***

ಕರೂರ್ ವೈಶ್ಯ ಬ್ಯಾಂಕ್‌ನಲ್ಲಿ ಹುದ್ದೆಗಳು

ಕರೂರ್ ವೈಶ್ಯ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50 ಅಂಕಗಳೊಂದಿಗೆ ಪದವಿ ಮುಗಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ನವೆಂಬರ್‌ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ಆಗಿರಬೇಕು. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 31, 2021

ಹೆಚ್ಚಿನ ಮಾಹಿತಿಗೆ: https://www.kvb.co.in/

***

ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಹುದ್ದೆಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2021-22 ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 115

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಬಿಟೆಕ್‌, ಎಂಎಸ್‌ಸಿ, ಸಿಎ ಹಾಗೂ ಇತ್ಯಾದಿ.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷಗಳಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ₹ 850, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ₹ 175

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 17, 2021

ಹೆಚ್ಚಿನ ಮಾಹಿತಿಗೆ: https://www.centralbankofindia.co.in/en/recruitments

***

ಎಐಐಎಂಎಸ್‌ನಲ್ಲಿ ಹುದ್ದೆಗಳು

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್‌), ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು.

ಹುದ್ದೆ: ಜ್ಯೂನಿಯರ್ ರೆಸಿಡೆಂಟ್‌

ಹುದ್ದೆಗಳ ಸಂಖ್ಯೆ: 24

ಸ್ಥಳ: ಆಂಧ್ರಪ್ರದೇಶದ ಗುಂಟೂರು

ವಿದ್ಯಾರ್ಹತೆ: ಈ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಗರಿಷ್ಠ 33 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 1000, ಎಸ್‌ಸಿ, ಎಸ್‌ಸಿ ಅಭ್ಯರ್ಥಿಗಳಿಗೆ ₹ 500 ಹಾಗೂ ಅಂಗವಿಕಲರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ

ಸಂದರ್ಶನ ದಿನಾಂಕ: ಜನವರಿ 5, 2022

ಸಂದರ್ಶನ ನಡೆಯುವ ಸ್ಥಳ: ಧರ್ಮಶಾಲಾ ಕಟ್ಟಡ, ಏಮ್ಸ್ ಮಂಗಳಗಿರಿ ಮೇನ್ ಕ್ಯಾಂಪಸ್.

ಹೆಚ್ಚಿನ ಮಾಹಿತಿಗೆ: https://www.aiimsexams.ac.in/info/Recruitments_new.html

(ಮಾಹಿತಿ ಕೃಪೆ ಪ್ರಜಾವಾಣಿ)

Friday, November 19, 2021

Karnataka Weather Today : ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

 
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ (Rain) ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು,ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಶಾಲೆ-ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ರಾಮನಗರ ಜಿಲ್ಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಇಂದು ( ನ.19) ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆ ಸಿಎಂ ಬೊಮ್ಮಾಯಿ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಪರಿಹಾರ ಕ್ರಮಗಳ ಬಗ್ಗೆ ಡಿಸಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.

(ಮಾಹಿತಿ ಕೃಪೆ Kannada news Now)

Monday, November 1, 2021

Puneet Rajkumar: 'ರಾಜಕುಮಾರ'ನ ಎರಡು ಕಣ್ಣುಗಳನ್ನು ನಾಲ್ವರಿಗೆ ಬೆಳಕಾಗಿದ್ದು ಹೇಗೆ.? ಇಲ್ಲಿದೆ ವೈದ್ಯರು ತೆರೆದಿಟ್ಟ ಮಾಹಿತಿ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ನಂತ್ರ, ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಅವರು ನೇತ್ರದಾನ ಮಾಡಿದ್ದಾರೆ. ಅವರ ಕಣ್ಣುಗಳನ್ನು ಇಬ್ಬರಿಗಲ್ಲ, ನಾಲ್ವರು ಕಣ್ಣಿನ ತೊಂದರೆ ( Eye Problem ) ಎದುರಿಸುತ್ತಿರುವಂತ ಜನರಿಗೆ ಅಳವಡಿಸಲಾಗಿದೆ.

ಇದು ಹೊಸ ತಂತ್ರಜ್ಞಾನದ ಮೂಲಕ ಅಳವಡಿಸುವಂತೆ ಆಯ್ತು. ಈ ಮೂಲಕ ನಟ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದರು ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ ಎಂದು ನಾರಾಯಣ ನೇತ್ರಾಲಯದ ( Narayana Netralaya ) ಮುಖ್ಯಸ್ಥ ಡಾ.ಭುಜಂಗಶೆಟ್ಟಿ ( Dr.Bhujangashetty ) ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಾಲ್ಕು ಮಂದಿಗೆ ಕಣ್ಣುಗಳನ್ನು ಅಳವಡಿಸಲಾಗಿದೆ. ಇದು ಹೇಗೆ ಆಗುತ್ತದೆ ಅಂತ ಯೋಚಿಸಿದ್ರೇ, ಹೊಸ ರೀತಿಯ ತಂತ್ರಜ್ಞಾನದ ಮೂಲಕ ನಾಲ್ವರಿಗೆ ಅಳವಡಿಸಲಾಗಿದೆ. ಮುಂದಿನ ಭಾಗ ಒಬ್ಬರಿಗೆ, ಅದರ ಹಿಂದಿನ ಭಾಗವನ್ನು ಮತ್ತೊಬ್ಬರಿಗೆ ಜೋಡಿಸಲಾಗಿದೆ. ಹೀಗೆ ಒಂದು ಕಣ್ಣನ್ನು ಇಬ್ಬರಿಗೆ, ಮತ್ತೊಂದು ಕಣ್ಣನ್ನು ಇಬ್ಬರಿಗೆ ಸೇರಿಸಿದಂತೆ ನಾಲ್ವರಿಗೆ ಪುನೀತ್ ರಾಜ್ ಕುಮಾರ್ ಕಣ್ಣನ್ನು ಅಳವಡಿಸಲಾಗಿದೆ ಎಂದರು.

ಇದು ರಾಜ್ಯದಲ್ಲೇ ಹೊಸ ಪ್ರಯೋಗವಾಗಿದೆ. ಒಂದೇ ದಿನದಲ್ಲಿ ನಾಲ್ವರಿಗೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ಅಳವಡಿಸಲಾಗಿದೆ. ನಾಲ್ವರು ಕಣ್ಣಿನ ತೊಂದರೆ ಅನುಭವಿಸುತ್ತಿದ್ದಂತವರಿಗೆ ಪುನೀತ್ ರಾಜ್ ಕುಮಾರ್ ಕಣ್ಣು ಅಳವಡಿಸಿದ ನಂತ್ರ ತುಂಬಾ ಚೆನ್ನಾಗಿದ್ದಾರೆ. ಹೀಗೆ ಶಸ್ತ್ರ ಚಿಕಿತ್ಸೆಯ ಮೂಲಕ ನಾಲ್ವರು ಅಂದರ ಭಾಳಿಗೆ ನಟ ಪುನೀತ್ ರಾಜ್ ಕುಮಾರ್ ಬೆಳಕಾಗಿದ್ದಾರೆ ಎಂದು ತಿಳಿಸಿದರು.

ಕನ್ನಡ ಮೇರು ನಟ ಡಾ.ರಾಜ್ ಕುಮಾರ್ ಅವರಂತೆ, ನಟ ಪುನೀತ್ ರಾಜ್ ಕುಮಾರ್ ತಮ್ಮ ಅಮೂಲ್ಯ ಕಣ್ಣುಗಳನ್ನು ನೇತ್ರದಾನ ಮಾಡಿದ್ದಾರೆ. ಇದರಿಂದ ನಾಲ್ವರು ಅಂದರ ಬಾಳಿನಲ್ಲಿ ಬೆಳಕಾಗಿದ್ದಾರೆ. ಅವರ ಕುಟುಂಬಕ್ಕೆ ಧನ್ಯವಾದಗಳು. ಇಂತಹ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂಬುದಾಗಿ ಡಾ.ಭುಜಂಗಶೆಟ್ಟಿಯವರು ಮನವಿ ಮಾಡಿದರು.

ಅಂದಹಾಗೇ ಬಹುತೇಕರ ಪ್ರಶ್ನೆ ಪುನೀತ್ ರಾಜ್ ಕುಮಾರ್ ಎರಡು ಕಣ್ಣುಗಳನ್ನು ನಾಲ್ವರಿಗೆ ಹೇಗೆ ಹಾಕೋಕೆ ಸಾಧ್ಯ ಎಂಬುದಾಗಿದೆ. ಆದ್ರೇ.. ಒಂದೊಂದು ಕಣ್ಣಿನ ಮೇಲಿನ ಹಾಗೂ ಅದರ ಕೆಳಗಿನ ಎರಡು ಲೇಯರ್ ಗಳು ಹಾನಿಕೊಂಡಿರುವಂತ ರೋಗಿಗಳಿಗೆ ಒಂದೊಂದು ಭಾಗವನ್ನು ಶಸ್ತ್ರ ಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದೆ. ಈ ಹೆ ಒಂದೊಂದು ಕಣ್ಣಿನಿಂದ ಎರಡು ಭಾಗಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ನಾಲ್ವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಂತ ರೋಗಿಗಳಿಗೆ ಅಳವಡಿಸೋ ಮೂಲಕ ನಾಲ್ವರು ಅಂದರ ಭಾಳಿನಲ್ಲಿ ನಟ ಪುನೀತ್ ರಾಜ್ ಕುಮಾರ್ ಬೆಳಕಾಗಿದ್ದಾರೆ.

(ಮಾಹಿತಿ ಕೃಪೆ Kannada News Now)


Saturday, October 30, 2021

BIG BREAKING NEWS: ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದಲ್ಲ, ನಾಳೆ ಮಾಡಲಾಗುತ್ತದೆ - ಸಿಎಂ ಬಸವರಾಜ ಬೊಮ್ಮಾಯಿ


 ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರಕ್ಕೆ ಅವಸರ ಮಾಡುವುದಿಲ್ಲ. ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಎಲ್ಲರೊಂದಿಗೂ ಮಾತನಾಡಿದ್ದೇವೆ. ಅಭಿಮಾನಿಗಳು ಬಹಳಷ್ಟು ಜನರು ಅವರ ಅಂತಿಮ ದರ್ಶನ ಮಾಡಬೇಕಿದೆ.ಹೀಗಾಗಿ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನಾಳೆ ನೆರವೇರಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಹಳಷ್ಟು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಗಣ್ಯರು ನಟ ಪುನೀತ್ ರಾಜ್ ಕುಮಾರ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಸಮಯವಾಗಿದೆ. ರಾತ್ರಿಯ ವೇಳೆಗೆ ಅಂತ್ಯಕ್ರಿಯೆ ಮಾಡುವುದು ಸವಾಲಿನ ವಿಚಾರವಾಗಿದೆ. ಈ ಎಲ್ಲಾ ನಿಟ್ಟಿನಲ್ಲಿ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಜೊತೆಗೆ ಮಾತುಕತೆ ನಡೆಸಿ, ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

(ಮಾಹಿತಿ ಕೃಪೆ Kannada News Now)

BIG BREAKING NEWS: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ


 ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಇಂದು ಸಂಜೆಯೇ ನೆರವೇರಿಸಲಾಗುವುದು. ಮಧ್ಯಾಹ್ನದ ವೇಳೆಗೆ ಪುನೀತ್ ರಾಜಕುಮಾರ್ ಅವರ ಪುತ್ರಿ ದೃತಿ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ. ಸಂಜೆ 6 ರಿಂದ 7 ಗಂಟೆಯ ಒಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಾ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ವಿದೇಶದಿಂದ ದೆಹಲಿಗೆ ಆಗಮಿಸಲಿರುವ ಪುನೀತ್ ಪುತ್ರಿ ದೃತಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬರಲಿದ್ದಾರೆ. ಅವರು ಮಧ್ಯಾಹ್ನದೊಳಗೆ ಬೆಂಗಳೂರಿಗೆ ಬಂದರೆ ದರ್ಶನ ಪಡೆದ ನಂತರ ಸಂಜೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

(ಮಾಹಿತಿ ಕೃಪೆ ಕನ್ನಡದುನಿಯಾ)

Friday, October 29, 2021

BIG BREAKING NEWS: 'ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್' ಇನ್ನಿಲ್ಲ


 *ವಸಂತ ಲೀಲಾ ಬಿ ಈಶ್ವರಗೆರೆ

ಬೆಂಗಳೂರು: ಜಿಮ್ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಇಂದು, ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದಂತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಚಿಕಿತ್ಸೆ ಫಲಕಾರಿಯಾಗದೇ ಇನ್ನಿಲ್ಲವಾಗಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ, ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಬಂದು, ವಿಕ್ರಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದ್ದಂತ ವೈದ್ಯರು, ಅವರ ಸ್ಥಿತಿ ಗಂಭೀರಗೊಂಡಿದೆ. ಅಂತಿಮ ಹಂತದ ಎಲ್ಲಾ ಚಿಕಿತ್ಸೆ ನಡೆಸುತ್ತಿರೋದಾಗಿ ತಿಳಿಸಿದ್ದರು.

ಈ ಎಲ್ಲಾ ಬೆಳವಣಿಗೆಯ ನಂತ್ರ, ಹೃದಯಾಘಾತಕ್ಕೆ ಒಳಗಾದಂತ ಅವರಿಗೆ ಕಡೆಯ ಕ್ಷಣದ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸಿದರೂ, ಚಿಕಿತ್ಸೆಗೆ ಪ್ರತಿಸ್ಪಂದಿಸದ ಕಾರಣ, ಇಂದು ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ( Power Star Puneet Rajkumar No More ) ಅವರು ಇನ್ನಿಲ್ಲವಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ಜೀವನ ಯಾತ್ರೆ

ಪುನೀತ್ ರಾಜ್‍ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ.

ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು.

ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002′ ಅಪ್ಪು ಚಿತ್ರದಲ್ಲಿ ಅಭಿನಯಿಸಿದರು. ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.

ವೈಯಕ್ತಿಕ ಜೀವನ

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್ 1975ರಂದು ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ. ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್ ಆಗಿತ್ತು.

ಅಭಿನಯಿಸಿದ ಚಲನಚಿತ್ರಗಳು

ಬಾಲ ನಟನಾಗಿ ಅಭಿನಯಿಸಿದಂತ ಚಿತ್ರಗಳು

  1. ಪ್ರೇಮದ ಕಾಣಿಕೆ
  2. ಭಾಗ್ಯವಂತ
  3. ಎರಡು ನಕ್ಷತ್ರಗಳು
  4. ಬೆಟ್ಟದ ಹೂವು
  5. ಚಲಿಸುವ ಮೋಡಗಳು
  6. ಶಿವ ಮೆಚ್ಚಿದ ಕಣ್ಣಪ್ಪ
  7. ಪರಶುರಾಮ್
  8. ಯಾರಿವನು
  9. ಭಕ್ತ ಪ್ರಹ್ಲಾದ
  10. ವಸಂತ ಗೀತ

ನಟರಾಗಿ ಅಭಿನಯಿಸಿದಂತ ಚಿತ್ರಗಳು

  • ಅಪ್ಪು
  • ಅಭಿ
  • ವೀರ ಕನ್ನಡಿಗ
  • ಮೌರ್ಯ
  • ಆಕಾಶ್
  • ನಮ್ಮ ಬಸವ
  • ಅಜಯ್
  • ಅರಸು
  • ಮಿಲನ
  • ಬಿಂದಾಸ್
  • ವಂಶಿ
  • ರಾಜ್ ದ ಶೋಮ್ಯಾನ್
  • ಪೃಥ್ವಿ
  • ರಾಮ್
  • ಜಾಕಿ
  • ಹುಡುಗರು
  • ಪರಮಾತ್ಮ
  • ಅಣ್ಣ ಬಾಂಡ್
  • ಯಾರೇ ಕೂಗಾಡಲಿ
  • ನಿನ್ನಿಂದಲೇ
  • ಮೈತ್ರಿ
  • ಪವರ್ ಸ್ಟಾರ್
  • ಧೀರ ರಣಧೀರ
  • ಚಕ್ರವ್ಯೂಹ
  • ದೊ‍ಡ್ಮನೆ ಹುಡುಗ
  • ರಾಜಕುಮಾರ
  • ಅಂಜನಿ ಪುತ್ರ
  • ನಟಸಾರ್ವಭೌಮ
  • ಯುವರತ್ನ

ಸೇರಿದಂತೆ ಇನ್ನೂ ಅನೇಕ ಚಿತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಹೀಗೆ ಬಹುಮುಖ ಪ್ರತಿಭೆಯ ಮೂಲಕ, ಬಾಲನಟನಾಗಿ, ನಟನಾಗಿ, ನಿರ್ಮಾಪಕನಾಗಿ ತೊಡಗಿಸಿಕೊಂಡಿದ್ದಂತ ಕನ್ನಡದ ದೊಡ್ಮನೆಯ ಕೊಂಡಿಯೊಂದು, ಇಂದು ಇನ್ನಿಲ್ಲವಾಗಿದೆ. ಈ ಮೂಲಕ ನಟ ಪುನೀತ್ ರಾಜ್ ಕುಮಾರ್ ಬಾರದ ಲೋಕಕ್ಕೆ ತೆರಳಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಮಾಹಿತಿ ಕೃಪೆ : ವೀಕಿಪೀಡಿಯಾ

Kannada News Now


Thursday, October 14, 2021

2 ತಲೆ, 3 ಕಣ್ಣುಗಳೊಂದಿಗೆ ವಿಚಿತ್ರ ಕರು ಜನನ..!


ಭುವನೇಶ್ವರ, ಅ. 13- ನವರಾತ್ರಿಯ ಸಮಯದಲ್ಲಿ 2 ತಲೆ ಹಾಗೂ 3 ಕಣ್ಣುಗಳುಳ್ಳ ಕರು ಜನಿಸಿರುವುದರಿಂದ ಇದು ದೇವರ ವರ ಪ್ರಸಾದ ಎಂದು ತಿಳಿದು ಜನರು ಕರುವನ್ನು ಪೂಜಿಸುತ್ತಿರುವ ಘಟನೆಯು ಒರಿಸ್ಸಾದ ನಬ್ರಂಗ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ನಬ್ರಂಗ್‍ಪುರ್ ಜಿಲ್ಲೆಯ ಬಿಜಾಪುರ ಗ್ರಾಮದಲ್ಲಿರುವ ಧನಿರಾಂ ಎಂಬ ರೈತನ ಮನೆಯಲ್ಲಿ ಈ ವಿಚಿತ್ರ ಕರು ಜನನವಾಗಿದ್ದು ಈ ಕರುವನ್ನು ನೋಡಲು ಸುತ್ತಮುತ್ತಲಿನ ಜನರು ತಂಡೋಪತಂಡವಾಗಿ ಬಂದು ಪೂಜೆಯನ್ನು ಸಲ್ಲಿಸಿದ್ದಾರೆ. ಧನಿರಾಂ ಅವರು ಎರಡು ವರ್ಷಗಳ ಹಿಂದೆ ಹಸುವೊಂದನ್ನು ಮನೆಗೆ ತಂದಿದ್ದು ಅದೇ ಈಗ ವಿಚಿತ್ರ ಕರುವಿಗೆ ಜನ್ಮ ನೀಡಿದೆ.

ಹಸುವು ಗರ್ಭ ಧರಿಸಿದ್ದಾಗ ಅದು ಅನಾರೋಗ್ಯದಿಂದ ಬಳಲುತ್ತಿದೆ ಎಂದು ನೆರೆಮನೆಯಾತ ಧನಿರಾಂಗೆ ತಿಳಿಸಿದ್ದರು, ಕರು ಜನಿಸಲಿ ಆಮೇಲೆ ನೋಡೋಣ ಎಂದು ಅವರು ಹೇಳಿದ್ದರು. ಆದರೆ ಈಗ ಹಸುವು 2 ತಲೆ ಹಾಗೂ 3 ಕಣ್ಣಿರುವ ಕರುವಿಗೆ ಜನ್ಮ ನೀಡಿದೆ.
ಕರುವು 2 ತಲೆ ಹೊಂದಿರುವುದರಿಂದ ಹಾಲು ಕುಡಿಯಲು ಪರದಾಡುವಂತಾಗಿದೆ.

(ಮಾಹಿತಿ ಕೃಪೆ ಈ ಸಂಜೆ)

Wednesday, October 13, 2021

ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ ಹಾಡಿನ ಸಾಹಿತ್ಯ

 


👉 

ಹೆಣ್ಣು:-ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ
ಆಕಾಶಾನೆ ಅಂಗೈಮೇಲೆ ತಂದಿಡ್ತಾನೆ
ಗಂಡು ಅಂದ್ರೆ ಹಿಂಗೇನೆ ಪ್ರೀತಿ ಅಂದ್ರೆ ತಂತಾನೆ
ಬಂಡೇಯಾದ್ರೂ ಬೆಣ್ಣೆಯಂತೆ ಕರಗೋಗ್ತಾನೆ
ಗಂಡು:-ನನಗೆ ಇದೇನಾಯ್ತೋ ಕಾಣೇ
ಮನಸೇ ಕಳೆದ್ಹೋಗಿದೆ..
ಹೊರಗೇ ನನ್ನೊಳಗೆಲ್ಲ ನೀನೇ
ನಿನದೇ ಜಪವಾಗಿದೇ..
ಹೆಣ್ಣು:-ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ
ಆಕಾಶಾನೆ ಅಂಗೈಮೇಲೆ ತಂದಿಡ್ತಾನೆ
************************
ಹೆಣ್ಣು:-ಪ್ರಿತಿಯಿಂದ್ಲೆ ತಾನೇ

ಆ ಮೋಡಾ ಕರಗಿ ಮಳೆಯು ಸುರಿಯೋದೂ..
ಗಂಡು:-ಹೌದಾ..
ಹೆಣ್ಣು:-ಪ್ರೇಮಾ ಇದ್ರೇ ತಾನೇ
ಆ ಕಡಲಾ ಕಡೆಗೆ ಹೊಳೆಯು ಹರಿಯೋದೂ..
ಗಂಡು:-ಹಂಗಾ..
ಹೆಣ್ಣು:-ದುಂಬಿ ದಂಡು ಹೂವ ಕಂಡು ಶರಾಣಾಗೋದು..
ಈ ಜಿಂಕೆ ದಂಡು ಹಸಿರ ಕಂಡು ಮರುಳಾಗೋದು
ಗಂಡು:-ಬೀಸೋ ಗಾಳಿಗೆ ಭಾರೀ ಮರವೇ ತಲೆಬಾಗೋದು
ಈ ಕಡಲಾ ನೀರು ಕುಣಿದುಕುಣಿದು ಅಲೆಯಾಗೋದು..ಆಆಆ.
ಹೆಣ್ಣು:-ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ
ಆಕಾಶಾನೆ ಅಂಗೈಮೇಲೆ ತಂದಿಡ್ತಾನೆ
************************
ಹೆಣ್ಣು:-ಸೂರ್ಯ ಚಂದ್ರ ಸಾಕ್ಷಿ

ಒಂದ್ ಸಾವಿರ ವರ್ಷ ಹಾಯಾಗಿರ್ತೀನಿ..
ಗಂಡು:-ಹೌದಾ..
ಹೆಣ್ಣು:-ನಾ ಮುದ್ದಿನ ಮಡದಿಯಾಗಿ
ನಿನ್ ನೂರು ಮಕ್ಕಳ ತಾಯಾಗಿರ್ತೀನಿ..
ಗಂಡು:-ಹಂಗಾ..
ಹೆಣ್ಣು:-ಜೋಡಿ ಹಕ್ಕಿಯಾಗಿ ನಾವು ಹಾರೋಣ ಬಾ..
ಈ ಕಾಮನಬಿಲ್ಲೇ ಜಾರೋ ಗುಂಪೆ ಜಾರೋಣ ಬಾ..
ಗಂಡು:-ಕಾಡು ಕಣಿವೆ ಬೆಟ್ಟ ಗುಡ್ಡ ಓಡಾಡುವಾ..
ಈಪ್ರೀತಿ ಎಲ್ಲಾ ಮುಳುಗಿ ಎದ್ದು ಈಜಾಡುವಾ..ಆಆಆ.
ಹೆಣ್ಣು ಅಂದ್ರೆ ಹಿಂಗೇನೆ
ವಯಸಿಗ್ ಬರ್ತಿದ್ ಹಂಗೇನೆ
ಆಕಾಶಕ್ಕೆ ಏಣಿ ಹಾಕೋದ್ ಸಹಜಾ ತಾನೇ.
ಪ್ರೀತಿ ಅಂದ್ರೆ ಹಿಂಗೇನೆ ಎರಡು ಜೀವ ಒಂದೇನೆ
ಭೂಮಿ ತುಂಬಾ ಇನ್ನು ಮುಂದೆ ನಾನು ನೀನೇ..
ಹೆಣ್ಣು:-ನನಗೆ ಇದೇನಾಯ್ತೋ ಕಾಣೇ.
ಮನಸೇ ಕಳೆದ್ಹೋಗಿದೆ..
ಹೊರಗೇ ನನ್ನೊಳಗೆಲ್ಲ ನೀನೇ
ನಿನದೇ ಜಪವಾಗಿದೇ..

ಕನ್ನಡದಲ್ಲಿ ಗೀತಾಂಜಲಿ ಹಾಡಿನ ಸಾಹಿತ್ಯ

 

 
👉
ಗೀತಾಂಜಲಿ
ಹಾಲುಗೆನ್ನೆಗೆ ವಾರೆಗಣ್ಣಿಗೆ
ನಮ್ಮೂರ ಹೆಣ್ಣಿಗೆ
ಪುಷ್ಪಾಂಜಲಿ
ತೊಂಡೆ ಹಣ್ಣಿಗೆ
ಬಾಳೆ ದಿಂಡಿಗೆ
ದಾಳಿಂಬೆ ಹಣ್ಣಿಗೆ

ಓ ಕನಕಾಂಬರಿ ನೀನು ಬಾರದೆ
ಪೂಜೆಗೆ ಹೂವಿಲ್ಲ
ಓ ಶ್ವೇತಾಂಬರಿ ನೀನು ಬಾರದೆ
ಉತ್ಸವ ಸಾಗಲ್ಲ

ಗೀತಾಂಜಲಿ
ಹಾಲುಗೆನ್ನೆಗೆ ವಾರೆಗಣ್ಣಿಗೆ
ನಮ್ಮೂರ ಹೆಣ್ಣಿಗೆ

ನೀರಾಗಲೇನೆ ನಾ?
ಮೈಯ ಮೇಲೆ ಜಾರಿ ಹೋಗಲು
ಗಾಜಾಗಲೇನೇ ನಾ?
ನಿನ್ನ ಅಂದ ಚಂದ ತೋರಲು

ಮಂಜಾಗಲೇನೆ ನಾ?
ನಿನ್ನ ಕೋಪ ತಂಪು ಮಾಡಲು
ತೇರಾಗಲೇನೆ ನಾ?
ನಿನ್ನ ಹೊತ್ತು ಕೊಂಡು ಹೋಗಲು

ಕೇಳದೆ ದೇವಿ ವರವ ಕೊಡಳು
ಹೊಗಳದೆ ನಾರಿ ಮನಸು ಕೊಡಳು
ಓ ಕನಕಾಂಬರಿ ನೀನು ಬಾರದೆ
ಪೂಜೆಗೆ ಹೂವಿಲ್ಲ
ಓ ಶ್ವೇತಾಂಬರಿ ನೀನು ಬಾರದೆ
ಉತ್ಸವ ಸಾಗಲ್ಲ

ಲಾಲಾಲಲಾ
ಲಾಲಲಾಲಲ ಲಾಲಲಾಲಲ
ಲಲಾಲಲಾಲಲ

ಕೈಲಾಸ ಕೈಯ್ಯಲಿ
ನೀನು ನನ್ನ ತೋಳಲ್ಲಿದ್ದಾರೆ
ಆಕಾಶ ಜೇಬಲಿ
ನಿನ್ನ ನಗು ಹೀಗೆ ಇದ್ದರೆ

ಓ ಮಿಂಚು ಹೂಗಳೆ
ನಿನ್ನ ಮಾತು ಕೇಳುತಿದ್ದರೆ
ಸೀನೆರೆ ಸಾಗರ
ನಿನ್ನ ಭಾವ ಹೀಗೆ ಇದ್ದರೆ

ಓಡದೆ ನೀನು
ಜಿಂಕೆಯಾದೆ
ಹಾರದೆ ನಾನು
ಹಕ್ಕಿಯಾದೆ
ಓ ಕನಕಾಂಬರಿ ನೀನು ಬಾರದೆ
ಪೂಜೆಗೆ ಹೂವಿಲ್ಲ
ಓ ಶ್ವೇತಾಂಬರಿ ನೀನು ಬಾರದೆ
ಉತ್ಸವ ಸಾಗಲ್ಲ

ಗೀತಾಂಜಲಿ
ಹಾಲುಗೆನ್ನೆಗೆ ವಾರೆಗಣ್ಣಿಗೆ
ನಮ್ಮೂರ ಹೆಣ್ಣಿಗೆ

ಪುಷ್ಪಾಂಜಲಿ
ತೊಂಡೆ ಹಣ್ಣಿಗೆ
ಬಾಳೆ ದಿಂಡಿಗೆ
ದಾಳಿಂಬೆ ಹಣ್ಣಿಗೆ


ಕೋವಿಡ್-19: ಭಾರತದಲ್ಲಿಂದು 15,823 ಹೊಸ ಕೇಸ್ ಪತ್ತೆ, 226 ಮಂದಿ ಸಾವು

  

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 15,823 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 226 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,01,743ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,51,189ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,07,653ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 22,844 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,42,901ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 13,25,399 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,63,63,442 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 96,43,79,212 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ...

(ಮಾಹಿತಿ ಕೃಪೆ ಕನ್ನಡ ಪ್ರಭ)